ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದಿಂದ 2016 ರಲ್ಲಿ ಅಧಿಸೂಚನೆ ಹೊರಡಿಸಿದ್ದ ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೀಘ್ರವಾಗಿ ಆದೇಶ ಪತ್ರ ನೀಡಬೇಕೆಂದು ಎಂ.ಬಿ ಅಂಬಲಗಿ ಒತ್ತಾಯಿಸಿದರು.
ಪತ್ರಿಕಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ 2016 ರಲ್ಲಿ ಒಟ್ಟು 661 ಹುದ್ದೆಗಳನ್ನು ಭರ್ತಿಗೆ ಅಧಿಸೂಚನೆ ನೀಡಲಾಗಿತ್ತು. ಅದರಲ್ಲಿ ಇಲ್ಲಿಯ ತನಕ 260ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ, ಸೇರಿದಂತೆ ಹೈದ್ರಾಬಾದ ಕರ್ನಾಟಕ ಭಾಗದ 160 ಹುದ್ದೆಗಳನ್ನು ಇನ್ನೂವರೆಗೂ ಆದೇಶ ಬಂದಿಲ್ಲ. ಈ ಪ್ರಕ್ರಿಯೆಯು 4 ವರ್ಷಗಳೇ ಮುಗಿದರೂ ಪೂರ್ಣಗೊಂಡಿಲ್ಲ, ಹೀಗಾಗಿ ನೇಮಕವಾದ ಅಭ್ಯರ್ಥಿಗಳಲ್ಲಿ ಗೊಂದಲ ಮೂಡಿಸಿದೆ ಎಂದು ತಿಳಿಸಿದರು.
ಕ್ರಮವಾಗಿ ನೇಮಕಾತಿ ವಿಧಾನವು ನಿಧಾನಗತಿಯಿಂದ ಸಾಗಿದ್ದರಿಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಹುದ್ದೆಗಳಿಗೆ ಎರಡೆರಡು ಬಾರಿ ದಾಖಲೆ ಪರಿಶೀಲಿಸಿದ್ದು, ಇನ್ನೂವರೆಗೂ ನೇಮಕಾತಿ ಆದೇಶ ಬರದಿರುವುದು ಸಾಕಷ್ಟು ನಿರಾಸೆ ಮೂಡಿಸಿದೆ ಎಂದು ನೇಮಕವಾದ ಅಭ್ಯರ್ಥಿಯೊಬ್ಬರು ತಿಳಿಸಿದರು.
ಈ ಸಂದರ್ಭದಲ್ಲಿ ಸೋಮಶೇಖರ್, ಪ್ರಕಾಶ್, ಶಶಿಕಲಾ, ಅಂಬಿಕಾ, ರಾಜಶೇಖರ್ ಇನ್ನಿತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…