ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಗರ್ಭಿಣಿಯರು, ತಾಯಂದಿರು ಹಾಗೂ ಮಕ್ಕಳು ಪೋಷಕಾಂಶದ ಕೊರತೆಯಿಂದಾಗಿ ಅನೇಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆ ಪೌಷ್ಠಿಕ ಆಹಾರದ ಅಗತ್ಯವಿದೆ. ಆದ್ದರಿಂದ ಗರ್ಭಿಣಿಯರು ಹಾಗೂ ತಾಯಂದಿರು ಪೌಷ್ಠಿಕಾಂಶಯುಳ್ಳ ಆಹಾರ ಸೇವನೆ ಮಾಡಬೇಕೆಂದು ಸಾವಳಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂಗೀತಾ ಮಾಲೆ ಅವರು ತಿಳಿಸಿದ್ದಾರೆ.
ಅವರು ಬುಧವಾರ ಶಿಶು ಅಭಿವೃದ್ಧಿ ಯೋಜನೆ ಕಲಬುರಗಿ ಗ್ರಾಮೀಣ ವಾಪ್ತಿಯ ಸಾವಳಗಿ ಗ್ರಾಮದ ಸಮುದಾಯ ಭವನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಕಲಬುರಗಿ ಗ್ರಾಮೀಣ, ಪ್ರಗತಿ ಅಭಿವೃದ್ಧಿ ಸಂಸ್ಥೆ ಮತ್ತು ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಲಯ ಮಟ್ಟದ ಪೋಷಣಾ ಅಭಿಯಾನ ಮಾಸಾಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಲಬುರಗಿ ಗ್ರಾಮೀಣ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ. ವಿಜಯಲಕ್ಷ್ಮೀ ಹೇರೂರ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಪೋಷಣ್ ಅಭಿಯಾನ ಯೋಜನೆಯ ಮಹತ್ವ ಮತ್ತು ಲಾಭದ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು.
ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಶಿವಕುಮಾರ ಕಾಂಬಳೆ, ಸಾವಳಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಅಂಗನವಾಡಿ ಕಾರ್ಯಕರ್ತೆ ಅಂಜನಾ ಪ್ರಾರ್ಥನೆ ಗೀತೆ ಹಾಡಿದರು. ಹಿರಿಯ ಮೇಲ್ವಿಚಾರಕಿ ಸವಿತಾ ಎನ್.ಕೆ ಸ್ವಾಗತಿಸಿದರು. ಮೇಲ್ವಿಚರಕಿ ಶ್ರೀಮತಿ ಶಿವಲೀಲಾ ಕಡಗಂಚಿ ಕಾರ್ಯಕ್ರಮ ನಿರೂಪಿಸಿದರು. ಮೇಲ್ವಿಚಾರಕಿ ಮೇನಕಾ ಚಲುವಾದಿ ವಂದಿಸಿದರು.