ಬಿಸಿ ಬಿಸಿ ಸುದ್ದಿ

ರೈತರ ಆರ್ಥಿಕ ವರಮಾನ ದ್ವಿಗುಣಗೊಳಿಸಲು ಕೃಷಿ ಮಸೂದೆ ಪೂರಕ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಕೇಂದ್ರ ಸರ್ಕಾರ ಮಂಡಿಸಿರುವ ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ ಮಸೂದೆಯು ಕೃಷಿ ಕ್ಷೇತ್ರದಲ್ಲಿ ಸುಧಾರಣೆಗಳನ್ನು ತರಲು ಮತ್ತು ರೈತರ ಆರ್ಥಿಕ ಪರಿಸ್ಥಿತಿ ದ್ವಿಗುಣಗೊಳಿಸಲು ಪೂರಕವಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು.

ಅವರು ಗುರುವಾರ ಲೋಕಸಭೆಯಲ್ಲಿ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರ ಸರ್ಕಾರ, ಈ ಸುಗ್ರೀವಾಜ್ಞೆಯ ಮೂಲಕ ಮಾರುಕಟ್ಟೆ ಏಕಸ್ವಾಮ್ಯವನ್ನು ತಡೆಯುವುದರ ಜೊತೆಗೆ, ನಮ್ಮ ರೈತರ ಉತ್ಪನ್ನಗಳಿಗೆ ರಾಷ್ಟ್ರವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಲು ದೃಢ ಹೆಜ್ಜೆ ಇರಿಸಿದೆ. ಇದರಿಂದ ಹೆಚ್ಚು ಹೆಚ್ಚು ಖರೀದಿದಾರರನ್ನು ತಲುಪಲು ಇದರಿಂದ ಸಾಧ್ಯವಾಗುತ್ತದೆ. ಇದರಿಂದಾಗಿ ಮಾರಾಟಗಾರರಲ್ಲಿ ಮತ್ತು ಖರೀದಿದಾರರಲ್ಲಿ ಆರೋಗ್ಯಕರ ಸ್ಪರ್ಧೆಗೆ ಅವಕಾಶ ದೊರೆತು ಮಧ್ಯವರ್ತಿಗಳ ಹಸ್ತಕ್ಷೇಪಕ್ಕೂ ಇಲ್ಲಿ ಅವಕಾಶವಿಲ್ಲದಂತಾಗುತ್ತದೆ. ಖರೀದಿದಾರರೂ ಸಹ ಕೋಲ್ಡ್ ಸ್ಟೋರೇಜ್ ಮತ್ತು ಗೋದಾಮುಗಳನ್ನು ಸ್ಥಾಪಿಸಿಕೊಳ್ಳುವುದರ ಮೂಲಕ ಹೆಚ್ಚು ಹೆಚ್ಚು ರೈತರನ್ನು ಆಕರ್ಷಿಸಬಹುದಾಗಿದೆ ಎಂಬುದಾಗಿ ತಿಳಿಸಿದರು.

ಪ್ರಸ್ತುತ ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರ ಕೃಷಿ ಮಾರುಕಟ್ಟೆ ವ್ಯವಸ್ಥೆಯಲ್ಲಿ ಹಲವಾರು ನಿರ್ಬಂಧಗಳಿದ್ದು, ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ಕೃಷಿ ಉತ್ಪನ್ನಗಳನ್ನು ಮುಕ್ತವಾಗಿ ಕೊಂಡೊಯ್ಯುವಂತಿಲ್ಲ. ಅಲ್ಲದೇ ಕೋಲ್ಡ್ ಸ್ಟೋರೇಜ್‍ಗಳ ಕೊರತೆ, ಸಾಕಷ್ಟು ಗೋದಾಮುಗಳಿಲ್ಲದೇ ಇರುವುದು, ಮೂಲಸೌಕರ್ಯಗಳಲ್ಲಿರುವ ಕೊರತೆಗಳಿಂದಾಗಿ ತರಕಾರಿ, ಹಣ್ಣುಗಳು ಮತ್ತು ಇತರೆ ಬೇಗನೇ ಹಾಳಾಗುವ ಸರಕುಗಳಲ್ಲಿ ಅಪಾರ ಪ್ರಮಾಣದ ನಷ್ಟಕ್ಕೆ ಕಾರಣವಾಗುತ್ತಿದೆ.

ಒಬ್ಬ ರೈತ ಸಣ್ಣ ಹಳ್ಳಿಯಲ್ಲಿ ಪಪ್ಪಾಯಿ ಅಥವಾ ಮಾವಿನಂತಹ ಹಣ್ಣನ್ನು ಬೆಳೆಸಿದರೆ, ತನ್ನ ಉತ್ಪನ್ನಗಳನ್ನು ದೇಶದ ಇತರ ಭಾಗಗಳಲ್ಲಿರುವ ಪ್ರೊಸೆಸರ್‍ಗಳಿಗೆ ಮಾರಾಟ ಮಾಡಲು ಆತನಿಗೆ ಸಾಧ್ಯವಾಗುವುದಿಲ್ಲ. ಇದರಿಂದಾಗಿ ಆತನು ಅನಿವಾರ್ಯವಾಗಿ ನಿರ್ಬಂಧಿತ ಪ್ರದೇಶದೊಳಗೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡಬೇಕಾಗಿರುತ್ತದೆ. ಒಂದು ವೇಳೆ ಆತನಿಗೆ ಅಗತ್ಯ ಮೂಲಸೌಕರ್ಯ ದೊರಕಿ, ತನ್ನ ಉತ್ಪನ್ನವನ್ನು ದೇಶದ ಇತರೆ ಭಾಗದಲ್ಲಿರುವ ಪ್ರೊಸೆಸರ್‍ಗೆ ಕೊಂಡೊಯ್ಯುವಂತಿದ್ದರೆ ಆತನಿಗೆ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದ ಕ್ರಮದಿಂದ ಧಾನ್ಯಗಳು, ಬೇಳೆಕಾಳುಗಳು, ಎಣ್ಣೆಬೀಜಗಳು, ಸೀ ಫುಡ್ಸ್ ಆಹಾರಗಳನ್ನು ಉತ್ಪಾದಿಸುವ ರೈತರು ದೇಶದ ನಾನಾ ಭಾಗಗಳ ಖರೀದಿದಾರರನ್ನು ಆಕರ್ಷಿಸಬಹುದಾಗಿದೆ ಎಂದರು.

ಈ ಮಸೂದೆಯು ಇ-ಮಾರ್ಕೆಟಿಂಗ್ ವ್ಯವಸ್ಥೆಗೆ ಅವಕಾಶವನ್ನು ಕಲ್ಪಿಸಿಕೊಡುವುದರಿಂದಾಗಿ ರೈತರಿಗೆ ಮಾರುಕಟ್ಟೆ ವೆಚ್ಚವೂ ಸಹ ಕಡಿಮೆಯಾಗಲಿದೆ. ದೇಶವಷ್ಟೇ ಅಲ್ಲದೇ ಇಡೀ ಪ್ರಪಂಚದಲ್ಲಿ ಕೊರೋನಾ ಹಿಡಿತದಲ್ಲಿದ್ದರೂ ರೈತರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ಸಲುವಾಗಿ ಕೃಷಿ ಮಾರುಕಟ್ಟೆಗಳನ್ನು ಅನಲಾಕ್ ಮಾಡುವುದು ಸೂಕ್ತವಾಗಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

23 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago