ಕಲಬುರಗಿ: ವಿಧಾನ ಪರಿಷತ್ ಮಾಜಿ ಸದಸ್ಯ ಉಗ್ರಪ್ಪ ಅವರ ತೆರವಾದ ಸ್ಥಾನಕ್ಕೆ ಕಲಬುರಗಿಯ ಕೋಲಿ ಗಂಗಾ ಮತ, ಕಬ್ಬಲಿಗ ಸಮಾಜದ ಹಿರಿಯ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್ ಸದಸ್ಯರನ್ನಾಗಿ ಈಚೆಗೆ ನೇಮಕ ಮಾಡಿದೆ.
ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸ್ನಾನಿಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜೂನ್ 03 ರಂದು ಸಂಜೆ 4 ಗಂಟೆಗೆ ಪಕ್ಚದ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಜಗದೇವಪ್ಪ ಗುತ್ತೇದಾರ ಕಾಳಗಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದ್ದು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ.