ಬೆಂಗಳೂರು: ಸೆಪ್ಟೆಂಬರ್ 21ರಿಂದ ನಡೆಯಲಿರುವ ವಿಧಾನ ಸಭೆಯ ಕಲಾಪದ ಹಿನ್ನಲೆಯಲ್ಲಿ ಸಭಾಧ್ಯಕ್ಷರ (ಸ್ಪೀಕರ್) ಆದೇಶದ ಮೇರೆಗೆ ಪ್ರತಿಯೊಬ್ಬ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಬೆಂಗಳೂರಿನ ವಿಧಾನ ಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಯಿತು.
ಅಧಿವೇಶನದ ಮುನ್ನ ಪ್ರತಿಯೊಬ್ಬ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಕೋವಿಡ್-19 ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕೆಂದು ಕಾಂಗ್ರೆಸ್ ಶಾಸಕ ಹಾಗೂ ವಿಧಾನ ಸಭೆಯ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಪರೀಕ್ಷೆಗೆ ಒಳಪಟ್ಟು ಮನವಿ ಮಾಡಿಕೊಂಡಿದ್ದಾರೆ.