ಸಾರಿಗೆ ಬಸ್- ಬೈಕ್ ಡಿಕ್ಕಿ: ಸ್ಥಳದಲ್ಲಿಯೇ ಯುವಕ ಸಾವು

0
117

ಕಲಬುರಗಿ: ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಗರ ಹೊರವಲಯದ ಸರಡಗಿ ಕ್ರಾಸ್ ಹತ್ತಿರ ಇಂದು ಬೆಳಿಗ್ಗೆ ನಡೆದಿದೆ.

ಕವಲಗಾ (ಕೆ) ಗ್ರಾಮದ ಮಲ್ಲಿಕಾರ್ಜುನ ಅಖಂಡಪ್ಪ ದೊಡ್ಡಗೌಡರು (17) ಮೃತ ಯುವಕ ಎಂದು ಗುರುತಿಸಲಾಗಿದೆ. ಯುವಕ ಇಂದು ಬೆಳಿಗ್ಗೆ ಕವಲಗಾ (ಕೆ) ಗ್ರಾಮದಿಂದ ಬೈಕ್ ಮೇಲೆ ಸರಡಗಿ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

Contact Your\'s Advertisement; 9902492681

ಬೆಂಗಳೂರಿನಿಂದ ಸೇಡಂಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here