ಕಲಬುರಗಿ: ದೇಶದ ಹಾಗೂ ವಿದೇಶಗಳ ಬಹುರಾಷ್ಟ್ರೀಯ ಸಂಸ್ಥೆಗಳ ವ್ಯಾಪಕವಾದ ಲೂಟಿಗೆ ದೇಶವನ್ನು ತೆರೆಯುತ್ತಿರುವುದು ಖಂಡನೀಯವಾಗಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿಗಳಾದ ಶರಣಬಸಪ್ಪ ಮಮಶೇಟಿ ಅವರು ತಿಳಿಸಿದ್ದಾರೆ.
ಇಂದು ಕೋಡ್ಲಿದಿಂದ ಕಾಳಗಿ ತಹಶೀಲ್ದಾರ್ ಕಚೇರಿ ವರೆಗೆ ರೈತ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನಾ ಮೆರವಣಿಗೆ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನಹಾಗೂಬೆಂಬಲ) ಸುಗ್ರಿವಾಜ್ಞೆ 2020, ಬೆಲೆ ಭರವಸೆ ಹಾಗೂ ಕೃಷಿ ಸೇವೆಗಳ ಕುರಿತ ರೈತ (ಸಶಕ್ತೀಕರಣ ಮತ್ತು ರಕ್ಷಣೆ) ಒಪ್ಪಂದ ಸುಗ್ರಿವಾಜ್ಞೆ 2020 ,ಅಗತ್ಯವಸ್ತುಗಳ ತಿದ್ದುಪಡಿ ಕಾಯ್ದೆ ಸುಗ್ರಿವಾಜ್ಞೆ – 2020, ವಿದ್ಯುತ್ಕಾಯ್ದೆ – 2020 ಮತ್ತು ದೇಶದ ಕಾರ್ಮಿಕ ವರ್ಗದ ಎಥೇಚ್ಛಲೂಟಿ ನಡೆಸಲುಕೈಗಾರಿಕೆಗಳ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಅನುಕೂಲ ಮಾಡುವ ಪ್ರಮುಖಕಾರ್ಮಿಕ ತಿದ್ದುಪಡಿ ಕಾಯ್ದೆಗಳು ಸೇರಿದಂತೆ ಎಲ್ಲ ಸುಗ್ರೀವಾಜ್ಞೆಗಳನ್ನು ವಾಪಾಸುಪಡೆಯುವಂತೆ ಮತ್ತು ಇವುಗಳನ್ನು ಶಾಸನಗಳನ್ನಾಗಿಸುವ ಪ್ರಯತ್ಙಗಳನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರಕಾರದಿಂದ ಕರ್ನಾಟಕಕ್ಕೆ ಬರಬೇಕಾಗಿರುವ ಜಿ.ಎಸ್.ಟಿ ಬಾಕಿ, ಬಜೆಟ್ ಅನುದಾನದ ಬಾಕಿ, ಬರ ಹಾಗೂ ಅತೀವೃಷ್ಟಿ ಪರಿಹಾರ, ಕೋವಿಡ್ಪರಿಹಾರದ ಮೊತ್ತವನ್ನು ಕೂಡಲೇಬಿಡುಗಡೆ ಸೇರಿದಂತೆ ಮುಂತಾದ ಬೇಡಿಕೆಗಳ ಈಡೇರಿಕೆಗಳಿಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ನಾಗಯ್ಯ ಸ್ವಾಮಿ, ಅಶೋಕ್ ಮ್ಯಾಗೆರಿ, ಪಾಂಡುರಂಗ ಮಾವಿನಕರ್ ಸೇರಿದಂತೆ ಮುಂತಾದವರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…