ಕಲಬುರಗಿ: ಅಖಿಲ ಕರ್ನಾಟಕ ಹೆಳವ ಸಮಾಜ ಕಲಬುರಗಿ ಜಿಲ್ಲಾ ಘಟಕದ ಸಭೆ ವೆಬಿನಾರನಲ್ಲಿ ನಡೆಯಿತು.
ರಾಜ್ಯಾದ್ಯಕ್ಷರಾದಂತ ಎಂ.ನಾಗರಾಜು ಹಾಗೂ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದಂತ ಶರಣಪ್ಪ ಹೆಳವರ ಕೆಲೂರ ಹಾಗೂ ರಾಜ್ಯ ಮಟ್ಟದ ಎಲ್ಲಾ ಪಧಾದಿಕಾರಿಗಳು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ಗೌರವಾದ್ಯಕ್ಷ ಮಲ್ಲಿಕಾರ್ಜುನ ಹೆಳವರ ಹೆಬ್ಬಾಳ ಸ್ವಾಗತಿಸಿದರು. ಜಿಲ್ಲಾದ್ಯಕ್ಷ ಸಾಯಬಣ್ಣ ಹೆಳವರ ಪ್ರಾಸ್ತಾವಿಕವಾಗಿ ಮಾತನಾಡಿ ಅಲೆಮಾರಿ ಹೆಳವ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಬಹಳ ಅಗತ್ಯವಾಗಿದೆ ಹಾಗೂ ಪ್ರತಿಯೊಂದು ಗ್ರಾಮದಲ್ಲಿ ಅಲೆಮಾರಿ ಹೆಳವ ಸಮಾಜದ ಸಮುದಾಯ ಭವನಗಳನ್ನು ನಿರ್ಮಿಸಬೇಕು ಎಂದರು.
ಕಾರ್ಯಕ್ರಮವನ್ನು ಉದ್ದೇಶಿಸಿ ರಾಜ್ಯ ನಿರ್ದೇಶಕರಾದ ಬಸವರಾಜ ಹೆಳವರ ಯಾಳಗಿ ಮಾತನಾಡಿ ಹೆಳವ ಸಮಾಜದ ಅಭಿವೃದ್ಧಿಗಾಗಿ ಗ್ರಾಮ ಮಟ್ಟದಿಂದ ಸಂಘಟನೆಯನ್ನು ಬೆಳೆಸುವುದು ಬಹಳ ಅಗತ್ಯವಾಗಿದೆ ಹಾಗೂ ಸಮಾಜದ ಯುವ ಪೀಳಿಗೆಯೂ ಕೂಡ ಸಮಾಜದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದು. ಸಮಾಜದ ಸ್ವಾವಲಂಬಿ ಬದುಕಿಗಾಗಿ ಸಂಘಟನೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಳವ ಸಮಾಜದ ಮುಖಂಡರಾದ ಬಸವಾರಾಜ ಹೆಳವರ ನಾಲತವಾಡ, ಪ್ರಭು ಹೆಳವರ ಯಾಳಗಿ, ಸಿದ್ಧರಾಮ ಬೈರಾಮಡಗಿ, ನಾಗಪ್ಪ ಹೆಳವರ, ಲಕ್ಷ್ಮಣ ಹೆಳವರ, ಸಂಗಮೇಶ ಹೆಳವರ ಹಾಗೂ ಸಂಜುಕುಮಾರ ಹೆಳವರ ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…