ಸುರಪುರ: ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಸಂಘದ ಮುಖಂಡರು ನಗರದ ತಹಸೀಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಸವರಾಜ ಹೊಸ್ಮನಿ ಮಾತನಾಡಿ,ಸರಕಾರ ದೇಶದಲ್ಲಿ ದಲಿತರು ತುಳಿಯುವ ಕೆಲಸ ಮಾಡುತ್ತಿದೆ.ಇದನ್ನು ಖಂಡಿಸುವುದಾಗಿ ನುಡಿದರು.ಅಲ್ಲದೆ ದಲಿತ ವಿರೋಧಿ ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು,ದೌರ್ಜನ್ಯ ತಡೆ ಕಾಯ್ದೆ ಬಲಗೊಳಿಸಬೇಕು,ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ತ್ವರಿತ ನ್ಯಾಯಾಲಯ ಸ್ಥಾಪಿಸಬೇಕು,ಎಸ್ಸಿ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು,ನ್ಯಾಯಮೂರ್ತಿಗಳಾದ ನಾಗಮೋಹನದಾಸ್ ಮತ್ತು ಸದಾಶಿವ ಆಯೋಗದ ವರದಿ ಬಹಿರಂಗಪಡಿಸಬೇಕು,ಮೀಸಲಾತಿ ಮತ್ತು ಬಡ್ತಿ ಮೀಸಲಾತಿಯಲ್ಲಿನ ಅನ್ಯಾಯ ಸರಿಪಡಿಸಬೇಕು,ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಉಪಯೋಜನೆ ಅಡಿಯ ಅನುದಾ ಸಮರ್ಪಕವಾಗಿ ಬಳಕೆಮಾಡಬೇಕು,ಭೂ ಒಡೆತನ ಮತ್ತು ಉದ್ಯೋಗಕ್ಕಾಗಿ ಸಲ್ಲಿಸಿರುವ ಎಲ್ಲಾ ಅರ್ಜಿಗಳ ಅನುದಾನ ಒದಗಿಸಬೇಕು,ಅಂಬೇಡ್ಕರ ಮತ್ತು ಇಂದಿರಾ ಆವಾಸ್ ಸೇರಿದಂತೆ ಎಲ್ಲಾ ಯೊಜನೆಗಳ ಅಡಿಯಲ್ಲಿ ಹಿತ್ತಲ ಮನೆಗಾಗಿ ೪ ಗುಂಟೆ ಜಾಗ ಮೀಸಲಿಡಬೇಕು ಹಾಗು ದೇವದಾಸಿ ಮಹಿಳೆಯರ ಮಾಸಿಕ ಸಹಾಯಧನ ಹೆಚ್ಚಳ ಕುಟುಂಬದ ಗಣತಿ ಮಾಡಿ ಪುನರ್ ವಸತಿ ಕಲ್ಪಿಸಬೇಕೆಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ನಿಂಗಣ್ಣ ಬಿರಾದಾರ್ ಅವರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಪ್ರಕಾಶ ಆಲ್ಹಾಳ ಸಮಾಜಿಕ ಕಾರ್ಯಕರ್ತ ಎಸ್.ಬಿ.ಹನ್ಸೂರ್ ಬಸವರಾಜ ಮಡಿವಾಳ ಶರಣಬಸವ ಕಾಂಬ್ಳೆ ಭೀಮವ್ವ ವೀರಾಬಾಯಿ ನಾಗಮ್ಮ ಎಸ್ ಈರಮ್ಮ ನಿಂಗಮ್ಮ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…