ಶಹಾಬಾದ:ಸಾರ್ವಜನಿಕರು ಮತ್ತು ವ್ಯಾಪಾರಸ್ಥರು ಕಡ್ಡಾಯವಾಗಿ ಮಾಸ್ಕ ಧರಿಸಲೇಬೇಕು.ಇಲ್ಲದಿದ್ದರೇ 200 ರೂ. ದಂಡ ವಿಧಿಸಲಾಗುವುದು ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನಾದ್ಯಂತ ಕೋವಿಡ್-19 ಸೊಂಕಿತ ಪ್ರಕರಣಗಳು ಹೆಚ್ಚಾಗುತ್ತಿವೆ.ಅಲ್ಲದೇ ತಾಲೂಕಿನಲ್ಲಿ ಕೋವಿಡ್-19ನಿಂದ ಹಲವಾರು ಜನರು ಮೃತಪಟ್ಟಿದ್ದಾರೆ.ಈಗಾಗಲೇ ಅನೇಕ ಬಾರಿ ಮಾಸ್ಕ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಜರ್ ಬಳಕೆ ಮಾಡುವ ಬಗ್ಗೆ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಜಾಗೃತಿ ಮೂಡಿಸಲಾಗಿದೆ. ಆಟೋ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸಲಾಗಿದೆ.ಆದರೂ ಸಹ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಮಾಸ್ಕ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿರುವುದು, ಗುಂಪುಗೂಡುವುದು ಕಂಡು ಬರುತ್ತಿದೆ. ಕೋವಿಡ್-19 ಗಂಬೀರತೆಯನ್ನು ತಿಳಿದುಕೊಳ್ಳದೇ ಓಡಾಡುತ್ತಿರುವುದು ಅಸಮಾಧಾನ ಉಂಟಾಗುತ್ತಿದೆ.
ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯ ಕಾಪಾಡುವುದು ನಿಮ್ಮ ಕರ್ತವ್ಯ.ಆದರೂ ಸಾರ್ವಜನಿಕರು ನಿರ್ಲಕ್ಷ್ಯ ತೋರುತ್ತಿದ್ದಾರೆ.ಆದ್ದರಿಂದ ವಿಷಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು, ಸಾರ್ವಜನಿಕರು ಮಾಸ್ಕ ಧರಿಸದೇ ಇರುವುದು ಕಂಡು ಬಂದರೆ ಸರಕಾರದ ಆದೇಶದ ಪ್ರಕಾರ 200 ರೂ. ದಂಡ ವಿಧಿಸಲಾಗುವುದು. ದಂಡಕ್ಕೆ ಅವಕಾಶ ನೀಡದೇ ಸರಕಾರದ ನಿಯಮಗಳನ್ನು ಪಾಲನೆ ಮಾಡುವುದರ ಮೂಲಕ ಕರೊನಾ ಹರಡದಂತೆ ಮುಂಜಾಗೃತೆ ವಹಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…