ಕಲಬುರಗಿ: ಕೃಷಿ ಮಸೂದೆ ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದು ಎಂದು ಕರೆದ ನಟಿ ಕಂಗನಾ ರಾವತ್ ದೇಶದ ಬೆನ್ನೆಲುಬಾಗಿರುವ ರೈತರಿಗೆ ಕ್ಷಮೆ ಕೇಳಬೇಕು, ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ನಯ ಸವೆರ ಸಂಘಟನೆಯ ಅಧ್ಯಕ್ಷರಾದ ಮೋದಿನ್ ಪಟೇಲ್ ಅಣಬಿ ಆಗ್ರಹಿಸಿದ್ದಾರೆ.
ದೇಶದ ಬೆನ್ನೆಲುಬಾಗಿರುವ ರೈತರಿಗೆ ನೋವಾಗುವ ಹಾಗೆ ಹೇಳಿಕೆ ಕೊಟ್ಟ ನಟಿ ಕಂಗನಾ ರಾವತ್ ಇವರು ಹೊಟ್ಟೆಗೆ ತಿನ್ನುವುದು ರೈತರು ಬೆಳೆದ ಅನ್ನ ,ತರಕಾರಿ, ರೈತರ ಬಗ್ಗೆ ಆಪತಿಜನಕವಾಗಿ ಮಾತನಾಡಿ ದೇಶದ ಮನಸ್ಸಿಗೆ ನೋವು ಆಗಿರುವ ಹಾಗೆ ಹೇಳಿಕೆ ಕೊಟ್ಟ ನಟಿ ಕಂಗನಾ ರಾವತ್ ಕ್ಷಮೆ ಕೇಳಬೇಕು ಎಂದು ರಾಜ್ಯಪಾಲರಿಗೆ ಬರೆದ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಈ ಹಿಂದೆ ಕಂಗನಾ ಮುಂಬೈ ನಗರಕ್ಕೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೊಲಿಸಿದರು. ಈಗ ಕೃಷಿ ಮಸೂದೆಗಳನ್ನು ವಿರೋಧಿಸುವ ರೈತರನ್ನು ಭಯೋತ್ಪಾದಕರು ಎಂದು ಕರೆದಿದ್ದಾರೆ.
ಸಂಸತ್ತಿನಲ್ಲಿ ಅಂಗೀಕಾರ ವಾದ ಕೃಷಿ ಸುಗ್ರೀವಾಜ್ಞೆ ಗಳ ವಿರುದ್ಧ ಇಡೀ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ ಅನೇಕ ರಾಜಕೀಯ ಪಕ್ಷಗಳು, ಅನೇಕ ಸಂಘಟನೆಗಳು, ರೈತರ ಪರ ಸಂಘಟನೆಗಳು, ದೇಶದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳು ತಂದಿದ್ದಾರೆ ಕಾಯ್ದೆಗಳು ಕಾರ್ಪೊರೇಟ್ ಕಂಪನಿಗಳ ಪರವಾಗಿವೆ .ರೈತರು ಮತ್ತು ವಿಮರ್ಶಕರ ಪ್ರಕಾರ ಈ ಮಸೂದೆಗಳು ಆಹಾರ ಭದ್ರತೆಯನ್ನು ಹಾಳುಮಾಡುತ್ತಿದೆ.
ಈ ಹಿಂದೆ ಕನಿಷ್ಠ ಬೆಂಬಲ ಬೆಲೆಯನ್ನು ನಾಶಗೊಳಿಸಿ ವ್ಯಾಪಾರಿಗಳಿಗೆ ಲಾಭವನ್ನು ನೀಡುತ್ತವೆಯೇ ಹೊರತು ರೈತರಿಗಲ್ಲ ಜೊತೆಗೆ ಬೆಲೆ ನಿಗದಿಗಾಗಿ ಯಾವುದೇ ಕಾರ್ಯವಿಧಾನವಿಲ್ಲ ಎಂದು ನಯ ಸವೇರ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರು ಬೀದಿಗಳಿದ್ದು, ದೇಶದಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಪಂಜಾಬಿನಲ್ಲಿ ಓರ್ವ ರೈತ ಮೃತಪಟ್ಟಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಕಂಗನಾ ರಾವತ್ ಹೇಳಿಕೆ ಇನ್ನಷ್ಟು ರೈತರ ಆಕ್ರೋಶವನ್ನು ಹೆಚ್ಚಿಸಿದೆ. ಕಂಗನಾ ರಾವತ್ ಅವರು ದೇಶದ ರೈತರಿಗೆ ಕ್ಷಮೆ ಕೇಳಬೇಕು .ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ನಯ ಸವೆರ ಸಂಘಟನೆ ಎಚ್ಚರಿಕೆ ನೀಡಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…