ಬೆಂಗಳೂರು: ಇಂದಿನ ಬೆಂಗಳೂರಿನ ವಿಧಾನಸೌಧದ ಮೊದಲನೇ ಮಹಡಿಯಲ್ಲಿ ವಿಧಾನ ಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿಯ (Businesses advisory committee) ಸಭೆಯು, ಸಭಾಧ್ಯಕ್ಷರಾದ (ಸ್ಪೀಕರ್ ) ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಭೆಯಲ್ಲಿ ಮಾನ್ಯ ಮುಖ್ಯ ಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಉಪ ಮುಖ್ಯ ಮಂತ್ರಿಗಳಾದ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ರಮೇಶ್ ಕುಮಾರ, ಆರ್.ವಿ. ದೇಶಪಾಂಡೆ ಹಾಗೂ ಜೇವರ್ಗಿ ಜನಪ್ರಿಯ ಶಾಸಕರು ಮತ್ತು ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಅವರು ಭಾಗವಹಿಸಿದರು.