ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು ೧೦ ತಿಂಗಳ ಅವಧಿಗೆ ಗೌರವ ಧನದ ಆಧಾರದ ಮೇಲೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದ್ದು, ಕೋವಿಡ್ ಹಿನ್ನೆಲೆಯಲ್ಲಿ ೨೦೨೦ ಏಪ್ರಿಲ್ ಮಾಹೆಯಿಂದ ವೇತನ ಪಾವತಿಯಾಗದ ಕಾರಣ, ೨೦೨೦ ಏಪ್ರಿಲ್ ಮಾಹೆಯಿಂದ ಆಗಸ್ಟ್ ಮಾಹೆಯವರೆಗೆ ಕರ್ತವ್ಯದ ಮೇಲೆ ಎಂದು ಪರಿಗಣಿಸಿ, ವೇತನ ಪಾವತಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ತಿಳಿಸಿದರು.
ಹಾವನೂರು ಮಂಜುನಾಥ್ ಅವರು ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಯಾಗದೆ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಕೂಡಲೇ ಅವರಿಗೆ ವೇತನ ಪಾವತಿ ಮಾಡುವಂತೆ ಪ್ರಶ್ನೋತ್ತರ ವೇಳೆಯಲ್ಲಿ ಮನವಿ ಮಾಡಿದರು.