ಬೆಂಗಳೂರು: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ಗೆ (ಡಿ.ಸಿ.ಎಂ) ಬೆಂಗಳೂರು ನಗರ/ ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಖಾಸಗಿ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳ ಉದ್ಯೋಗಿಗಳಿಂದ ಹಾಗೂ ಖಾಸಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಸಹ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಪ್ರವೇಶ ಪಡೆಯುವ ಕೊನೆಯ ದಿನಾಂಕ 30-9-2020. ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400/- ಶಿಷ್ಯ ವೇತನ ನೀಡಲಾಗುವುದು ಹಾಗೂ 30 ವರ್ಷದ ಒಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500/- ಶಿಷ್ಟಯ ವೇತನ ನೀಡಲಾಗುವುದು.
ಡಿಪ್ಲೋಮಾ ಕೋರ್ಸ್ ಪಡೆದ ಅಭ್ಯರ್ಥಿಗಳಿಗೆ ಸಹಕಾರ ಸಂಘ/ಸಂಸ್ಥೆ/ಬ್ಯಾಂಕುಗಳ ಉದ್ಯೋಗ ನೇಮಕಾತಿ ಮಾಡುವ ಸಂದರ್ಭದದಲ್ಲಿ ಪ್ರಥಮ ಆದ್ಯತೆ ನೀಡಲಾಗವುದು ಮತ್ತು ಡಿ.ಸಿ.ಎಂ. ಕೋರ್ಸಿನ ಪಠ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ನೇಮಕಾತಿಯ ಸ್ವರ್ಧಾತ್ಮಕ ಪರೀಕ್ಷೆಗೆ ಹಾಗೂ ಇನ್ನಿತರೆ ಹುದ್ದೆಗಳಿಗೆ ಅನುಕೂಲವಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 080-26602046, 9902189872, 9036259781, 8550017134. ಅರ್ಜಿ ದೊರೆಯುವ ಸ್ಥಳ : ಕೆ.ಐ.ಸಿ.ಎಂ. ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ. 1/3, 2 ನೇ ಮಹಡಿ, 3 ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18 ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…