ಲೋಕ ಜನಶಕ್ತಿ ಪಕ್ಷಕ್ಕೆ ಪದಾಧಿಕಾರಿಗಳ ನೇಮಕ

0
43

ಸುರಪುರ: ಲೋಕ ಜನಶಕ್ತಿ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ನೇಮಿಸಲಾಯಿತು.ಪಕ್ಷದ ಜಿಲ್ಲಾಧ್ಯಕ್ಷ ರಾಜಾ ಅಪ್ಪಾರಾವ್ ನಾಯಕ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುರಪುರ ನಗರ ಘಟಕದ ಅಧ್ಯಕ್ಷರನ್ನಾಗಿ ಗೋಪಾಲ ದರಬಾರಿ ಅವರನ್ನು ಹಾಗು ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ದುರಗಪ್ಪ ಬಡಿಗೇರ ನಾಗರಾಳ ಅವರನ್ನು ನೇಮಕಗೊಳಿಸಿ ಆದೇಶ ಪತ್ರ ನೀಡಿದರು.

ಈ ಸಂದರ್ಭದಲ್ಲಿ ರಾಜಾ ಅಪ್ಪಾರಾವ್ ನಾಯಕ ಮಾತನಾಡಿ, ಜಿಲ್ಲೆಯಾದ್ಯಂತ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರ ಮಾರ್ಗದರ್ಶನದ ಮೇರೆಗೆ ತಮ್ಮನ್ನು ಪದಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು,ಪಕ್ಷ ಸಂಘಟನೆಯ ಜೊತೆಗೆ ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂಧಿಸಿ ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಕರೆ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾನಪ್ಪ ಮೇಲಿನಮನಿ ತಾಲೂಕು ಪ್ರಧಾನ ಕಾರ್ಯದರ್ಶಿ ಅಂಬ್ರೇಶ ನಾಯಕ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here