ಗ್ರೂಪ್ “ಡಿ” ನೌಕರ ಪೂರೈಕೆಗಾಗಿ ಸಂಸ್ಥೆಯಿಂದ ಪ್ರಸ್ತಾವನೆ ಆಹ್ವಾನ

1
58

ಕಲಬುರಗಿ: ಜಿಲ್ಲಾ ಖಜಾನೆ ಉಪನಿರ್ದೇಶಕರ ಕಚೇರಿಯಲ್ಲಿ ಖಾಲಿಯಿರುವ ಒಂದು ಗ್ರೂಪ್-ಡಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಪೂರೈಕೆಗಾಗಿ ಆಸಕ್ತ ಸಂಸ್ಥೆಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಖಜಾನೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ಸಂಸ್ಥೆಗಳು ಉಪನಿರ್ದೇಶಕರು, ಜಿಲ್ಲಾ ಖಜಾನೆ ಕಲಬುರಗಿ ಇವರ ಹೆಸರಿನಲ್ಲಿ ಪ್ರಸ್ತಾವನೆಯನ್ನು ಕಲಬುರಗಿ ಮಿನಿ ವಿಧಾನಸೌಧದ ಕೊಠಡಿ ಸಂಖ್ಯೆ 6 ರಲ್ಲಿನ ಕಲಬುರಗಿ ಜಿಲ್ಲಾ ಖಜಾನೆಯ ಉಪನಿರ್ದೇಶಕರ ಕಚೇರಿಯಲ್ಲಿ 2020ರ ಸೆಪ್ಟೆಂಬರ್ 25ರ ಸಂಜೆ 4.30 ಗಂಟೆಯೊಳಗಾಗಿ ಸಲ್ಲಿಸಬೇಕು.

Contact Your\'s Advertisement; 9902492681

ಕೆ.ಟಿ.ಪಿ.ಪಿ. ಕಾಯಿದೆ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಖಜಾನೆಯ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here