ಕಲಬುರಗಿ: ಟೆಂಗಳಿ ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಿಂದ ಪ್ರವಾಹ ಉಂಟಾದ ಕಾರಣ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತ ಆಗಿದ್ದಕ್ಕೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾ ಟೆಂಗಳಿ ಅವರು ಸ್ಥಳಕ್ಕೆ ಹೋಗಿ ವೀಕ್ಷಣೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರಿ ಶಾಲೆಯಲ್ಲಿ ಗಂಜಿ ಕೇಂದ್ರವನ್ನು ತೆರೆದು ಸಂತ್ರಸ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು.
ಟೆಂಗಳಿ ಗ್ರಾಮದ ಸಣ್ಣ ಸೇತುವೆ ಹಾಳಾಗಿದ್ದು ಕೇಸು ಕೋರ್ಟಿನಲ್ಲಿದ್ದ ಅದರ ಬಗ್ಗೆ ಚರ್ಚಿಸಿ ತಕ್ಷಣವೇ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.
ಗ್ರಾಮದ ಹನುಮಾನ್ ಮಂದಿರದಲ್ಲಿ ಸಮೃದ್ಧಿಯೋಜನೆಯ ಆಯ್ಕೆಯಾದ ಬೀದಿ ವ್ಯಾಪಾರಿಗಳಿಗೆ ತಲಾ ೧೦ ಸಾವಿರ ಅಂತೆ ೨೨ ಫಲಾನುಭವಿಗಳಿಗೆ ಪ್ರೋತ್ಸಾಹ ಧನದ ಪ್ರಮಾಣಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಸೇಡಂ ವಲಯ ಸಹಾಯಕ ಆಯುಕ್ತರು, ಕಾಳಗಿ ತಶೀಲ್ದಾರ್, ಟೆಂಗಳಿ ಗ್ರಾಮದ ಪಿಡಿಯೋ, ತಲಾಟಿ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮದ ಮುಖಂಡರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…