ಶಹಾಬಾದ:ಸರಕಾರದ ಯೋಜನೆಗಳು ಇರುವುದೇ ಜನರಿಗೋಸ್ಕರ್.ಆ ಯೋಜನೆಗಳು ಜನರಿಗೆ ಮುಟ್ಟಬೇಕಾದರೆ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಪ್ರಾಮಾಣಿಕವಾಗಿ ಅರ್ಹ ವ್ಯಕ್ತಿಗಳಿಗೆ ತಲುಪಿಸುವ ಕೆಲಸ ಮಾಡಬೇಕಿದೆ ನಗರಸಭೆಯ ಪೌರಾಯುಕ್ತ ಕೆ.ಗುರಲಿಂಗಪ್ಪ ಹೇಳಿದರು.
ಅವರು ಮಂಗಳವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾದ ಪೋಷಣಾ ಅಭಿಯಾನ ಯೋಜನೆಯಡಿ ಪೋಷಣಾ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ನವಜಾತ ಶಿಶುಗಳ ಮರಣ ಹಾಗೂ ಹುಟ್ಟುವು ಮಗುವಿನ ಅಪೌಷ್ಠಿಕತರ ಪ್ರಮಾಣ ತಗ್ಗಿಸಲು ಸರಕಾರ ಜಾರಿಗೆ ತಂದ ಜೋಜನೆಯೇ ಪೋಷಣಾ ಅಭಿಯಾನ. ಸರಕಾರವು ಯೋಜನೆ ಜಾರಿಗೊಳಿಸಿದ್ದು, ಗರ್ಭಿಣಿಯರು ಅಂಗನವಾಡಿ ಕೇಂದ್ರಗಳ ಮುಖಾಂತರ ಇದರ ಸದುಪಯೋಗಪಡಿಸಿಕೊಳ್ಳಿ ಮತ್ತು ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಪೋಷಕಾಂಶದ ಕೊರತೆ ಹೆಚ್ಚಿನ ಪ್ರಮಾಣದಲ್ಲಿ ಕಾಣುತ್ತಿದ್ದು, ಇದೊಂದು ಆತಂಕಕಾರಿ ಬೆಳವಣಿಗೆಯಾಗಿದೆ. ನಮ್ಮ ದೇಶದಲ್ಲಿ ಹುಟ್ಟುವ ಪ್ರತಿಯೊಂದು ಮಗುವು ಪೌಷ್ಠಿಕಾಂಶದ ಕೊರತೆಯಿಂದ ನರಳುತ್ತಿದೆ.ಉತ್ತಮವಾದ ಆರೋಗ್ಯವನ್ನು ಪಡೆಯಬೇಕಾದರೆ ಪೌಷ್ಠಿಕ ಅಂಶವನ್ನು ಹೊಂದಿರುವ ಆಹಾರವನ್ನು ಬಾಣಂತಿಯರು ಮತ್ತು ಗರ್ಭಿಣಿಯರು ಸೇವಿಸಬೇಕೆಂದು ಹೇಳಿದರು.
ಅಂಗನವಾಡಿ ಮೇಲ್ವಿಚಾರಕಿ ಮೀನಾಕ್ಷಿ ಮಾತನಾಡಿ, ತಾಲೂಕಿನಿಂದ ರಾವೂರ, ವಾಡಿ,ನಾಲವಾರ,ಕೊಲ್ಲೂರ್, ಪೇಠಸಿರೂರ,ಭಂಕೂರ, ಇಂಗಗಿ, ಹೊನಗುಂಟಾ ಮುಖಾಂತರ ಶಹಾಬಾದ ನಗರದಲ್ಲಿ ರಥ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸಲಿದೆ ಎಂದರರು.
ಅಂಗನವಾಡಿ ಮೇಲ್ವಿಚಾರಕಿ ನೇತ್ರಾವತಿ , ಶಕುಂತಲಾ ಸಾಕ್ರೆ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ಜಗನ್ನಾಥ, ಸಾಬಣ್ಣ ಸುಂಗಲರ್, ಅಶೋಕ ತುಂಗಳ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…