ಯಾದಗಿರಿ: ಕಳೆದ ದಿನಗಳ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ಬಾಬುರವರು ಎಸಿಬಿ ಬಲೆಗೆ ಬಿದ್ದ ದಿನಗಳು ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ವಿಕೆಟ್ ಪತನಗೊಂಡಿದೆ.
ಜಿಲ್ಲಾ ಲೆಕ್ಕಪರಿಶೋಧನ ಇಲಾಖೆಯ ಅಧಿಕಾರಿ ರವಿಕುಮಾರ್ ಅವರು ಎಸಿಬಿ ಬಲೆಗೆ ಬಿದ್ದ ಮತ್ತೋರ್ವ ಅಧಿಕಾರಿಯಾಗಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ 30000 ಹಣವನ್ನು ಬೇಡಿಕೆಯಿಟ್ಟ ಹಿನ್ನೆಲೆ ಎಸಿಬಿ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಜಿಲ್ಲೆ ಲೆಕ್ಕಪರಿಶೋಧನೆ ಇಲಾಖೆ ಅಧಿಕಾರಿ ರವಿಕುಮಾರ್ ಅವರು ಕೆಲವು ದಿನಗಳ ಹಿಂದೆ ಪಸ್ಪೂಲ್ ಗ್ರಾಮ ಪಂಚಾಯಿತಿಗೆ ಅಡಿಟ್ ಮಾಡಲು ಹೋಗಿದ್ದರು ಎಂದು ಮಾಹಿತಿ ತಿಳಿದು ಬಂದಿದೆ. ಪಸ್ಪೂಲ್ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಮಲ್ಲಣ್ಣ ಅವರು ಇಂದು 30000 ರೂ. ಹಣವನ್ನು ನೀಡಲು ಹೋದಾಗ ಎಸಿಬಿ ಡಿವೈಎಸ್ಪಿ ಬಸಿರ್ ಪಟೇಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಗುರುಪಾದಪ್ಪ ಬಿರಾದರ್ ಹಾಗೂ ರಾಘವೇಂದ್ರ , ಸಿಬ್ಬಂದಿ ಅಮರ್ನಾಥ್ ಗಾಯಕ್ವಾಡ್ ದಾಳಿಯಲ್ಲಿ ಭಾಗಿಯಾಗಿದ್ದಾರೆ.
ವಿಪರ್ಯಾಸವೆಂದರೆ ಲೆಕ್ಕಪರಿಶೋಧನೆ ಇಲಾಖೆಯು ಜಿಲ್ಲಾಡಳಿತದ ಜಿಲ್ಲಾಧಿಕಾರಿಗಳ ಕಚೇರಿಯ ಮೇಲ್ಭಾಗದಲ್ಲಿದ್ರೂ ಅಧಿಕಾರಿ ರವಿ ಕುಮಾರ್ ಭ್ರಷ್ಟಾಚಾರಕ್ಕೆ ಕೈಹಾಕಿ ಕೈ ಸುಟ್ಟುಕೊಂಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…