ಸೇಡಂ: ಸತತ ಮಳೆ ಸುರಿಯುತ್ತಿರುವುದರಿಂದ ಜನ ಜೀವನ ಅಸ್ವಸ್ಥವಾಗುವುದಲ್ಲದೆ ಕೇಲವು ಗ್ರಾಮಗಳ ಮಳೆಯಿಂದ ರಸ್ತೆ ಸೇತುವೆ ಕಿತ್ತು ಹೋಗಿ ಗುಂಡಿಗಳು ನಿರ್ಮಾಣವಾಗಿದ್ದು, ಶಿಘ್ರವಾಗಿ ರಸ್ತೆ ದುರಸ್ತಿ ಹಾಗೂ ವಸತಿ ಯೋಜನೆಯ ಫಲಾನುಭವಿಗಳ ಹಣ ಬಿಡುಗಡೆ ಮಾಡಬೇಕೆಂದು ಅಗ್ರಹೀಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಸೇಡಂ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ವೇಳೆಯಲ್ಲಿ ಪಕ್ಷದ ಅಧ್ಯಕ್ಷರಾದ ರೇವಣಸಿದ್ದಪ್ಪ ಸಿಂಧೆ ಮಾತನಾಡಿ, ಮಳೆ ನೀರಿನಿಂದ ರಸ್ತೆ ಹದಗೆಟ್ಟಿರುವುದರಿಮದ ಸಾರ್ವಜನಿಕರಿಗೆ ಓಡಾಡಲು ಮತ್ತು ವಾಹನ ಅಪಘಾತಗಳು ಸಂಭವಿಸುತ್ತಿದೆ. ವಾರ್ಡ್ ಮಟ್ಟದಲ್ಲಿ ಪಾದಚಾರಿಗಳಿಗೆ ಓಡಾಡಲು ಪರದಾಡುತ್ತಿದ್ದಾರೆ ಆದರಿಂದ ಶಿಘ್ರವಾಗಿ ರಸ್ತೆ ದುರಸ್ತಿ ಮಾಡಲು ಮುಂದಾಗಬೇಕೆಂದು ಒತ್ತಾಯಿಸಿದರು.
ರಾಜೀವ ಗಾಂಧಿ ವಸತಿ ನಿಗಮದ ವತಿಯಿಂದ ಕೇಲವು ಫಲಾನುಭವಿಗಳ ಬಿಲ್ ಪಾವತಿಯಾಗದೆ ಮನೆಗಳು ಅರ್ಧಕ್ಕೆ ನಿಂತು ಹೋಗಿದ್ದು, ತಡೆಹಿಡಿದಿರುವ ಬಿಲ್ ಬೀಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಮಹಾದೇವಪ್ಪ ಶಕಲಾಸಪಲ್ಲಿ, ಗೋಪಾಲ್ ಎಲ್ ಮೌರ್ಯ, ದೇವಿ ಶಂಕರ್ ,ಮುಂತಾದ ಕಾರ್ಯಕರ್ತರು ಹಾಜರಿದ್ದರು.