ಬಿಸಿ ಬಿಸಿ ಸುದ್ದಿ

ರೇಸ್ ಕೋರ್ಸ್ ಸ್ಥಳಾಂತರ ಇಲ್ಲ : ಜೆ.ಸಿ.ಮಾಧುಸ್ವಾಮಿ

ಬೆಂಗಳೂರು: ರೇಸ್ ಕೋರ್ಸ್‌ನ್ ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ಸ್ಥಳಾಂತರ ಸಾಧ್ಯ ಇಲ್ಲ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನ ಕಲಾಪದಲ್ಲಿ ಮುಖ್ಯಮಂತ್ರಿಗಳ ಪರವಾಗಿ ವಿಧಾನಸಬೆಯಿಂದ ಅಂಗೀಕೃತ ರೂಪದಲ್ಲಿರುವ ೨೦೨೦ನೇ ಸಾಲಿನ ಕರ್ನಾಟಕ ರೇಸ್ ಕೋರ್ಸ್‌ಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆ ಹಾಗೂ ವಿಧೇಯಕವನ್ನು ಮಂಡಿಸಿದಾಗ, ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್, ನಾರಾಯಣ ಸ್ವಾಮಿ ಮಾತನಾಡಿ, ನಗರದ ಹೃದಯ ಭಾಗದಲ್ಲಿರುವ ರೇಸ್ ಕೋರ್ಸ್‌ನ್ನು ಹೊರವಲಯಕ್ಕೆ ಸ್ಥಳಾಂತರಿಸಬೇಕೆಂದು ಹಲವಾರು ಬಾರಿ ಚರ್ಚೆಯಾದರು ಅದು ಸಾಧ್ಯವಾಗಿಲ್ಲ ಎಂದಾಗ ಸಚಿವರು ಸ್ಥಳಾಂತರ ಸಾಧ್ಯವಿಲ್ಲ ಎಂದರು.

ಕರ್ನಾಟಕ ರೇಸ್ ಕೋರ್ಸ್‌ಗಳ ಕೆಲವು ನಿಯಮಾವಳಿಗೆ ಕೆಲವು ಸಣ್ಣ ಪುಟ್ಟ ತಿದ್ದುಪಡಿ ತರಲಾಗಿದೆ. ಸೆಕ್ಷನ್ ೪,೫,೬,೭ರ ನಿಯಮಗಳನ್ನು ಉಲ್ಲಂಘನೆ ಮಾಡಿದ ವೇಳೆ ೫೦೦ ರೂ. ಇದ್ದ ದಂಡದ ಪ್ರಮಾಣವನ್ನು ೫೦ ಸಾವಿರಕ್ಕೆ , ಒಂದು ಸಾವಿರ ಇದ್ದ ದಂಡದ ಪ್ರಮಾಣವನ್ನು ೧ ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪರವಾನಗಿ ಇಲ್ಲದೆ ರೇಸ್ ನಡೆಸಿದರೆ, ಮಾಲೀಕರು ರೇಸ್‌ನಲ್ಲಿ ಭಾಗವಹಿಸಿದರೆ ದಂಡ ವಿಧಿಸಲಾಗುತ್ತದೆ ಎಂದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago