ಬೆಂಗಳೂರು: ೨೦೨೦-೨೧ ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆ/ಪರಿಶಿಷ್ಟ ಪಂಗಡ ಉಪ ಯೋಜನೆ ಅಡಿಯಲ್ಲಿ ಅಂತಾರಾಷ್ಟ್ರೀಯ/ರಾಷ್ಟ್ರೀಯ/ರಾಜ್ಯ ಮಟ್ಟದಲ್ಲಿ ವಿಜೇತರಾದ ಪ.ಜಾತಿ/ಪ.ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮದ ಕುರಿತು ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ೩೧-೦೮-೨೦೨೦ ಕೊನೆಯ ದಿನಾಂಕವಾಗಿತ್ತು.
ತಾಂತ್ರಿಕ ದೋಷದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಕ್ರೀಡಾಪಟುಗಳ ಕೋರಿಕೆ ಮೇರೆಗೆ ಸೆಪ್ಟೆಂಬರ್ ೨೪ ರವರೆಗೆ ೧೦ ದಿನಗಳ ಕಾಲ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.