Monday, July 15, 2024
ಮನೆಬಿಸಿ ಬಿಸಿ ಸುದ್ದಿಮೌಲಾನಾ ಆಜಾದ್ ಆಂಗ್ಲ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮೌಲಾನಾ ಆಜಾದ್ ಆಂಗ್ಲ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗÀಳಲ್ಲಿ 6ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಕೆಳಕಂಡ ಖಾಲಿಯಿರುವ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಸಮಾಜ ವಿಜ್ಞಾನ 3 ಶಿಕ್ಷಕರ ಹುದ್ದೆಗಳಿಗೆ ಬಿ.ಎ. ಬಿ.ಇಡಿ., ಇಂಗ್ಲೀಷ 4 ಶಿಕ್ಷಕರ ಹುದ್ದೆಗೆ ಬಿ.ಎ. ಬಿ.ಇ.ಡಿ. ಪಾಸಾಗಿರಬೇಕು. ವಿಜ್ಞಾನ 3 ಶಿಕ್ಷಕರ ಹುದ್ದೆಗೆ ಮತ್ತು ಗಣಿತ 1 ಶಿಕ್ಷಕ ಹುದ್ದೆಗೆ ಬಿ.ಎಸ್ಸಿ. ಬಿ.ಇ.ಡಿ (ಪಿ.ಸಿ.ಎಂ.ಬಿ) ಪಾಸಾಗಿರಬೇಕು. ಉರ್ದು ವಿಷಯದ 2 ಶಿಕ್ಷಕರ ಹುದ್ದೆಗಳಿಗೆ ಬಿ.ಎ. ಬಿ.ಇ.ಡಿ. ಪಾಸಾಗಿರಬೇಕು.

ಟಿ.ಇ.ಟಿ. ಉತ್ತೀರ್ಣ, ಕನಿಷ್ಠ ಎರಡು ವರ್ಷದ ಅನುಭವ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು 2020ರ ಸೆಪ್ಟೆಂಬರ್ 30 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಆಯಾ ತಾಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಕಲಬುರಗಿ, ಅಫಜಲಪೂರ ಹಾಗೂ ಜೇವರ್ಗಿ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಹಾಗೂ ಅಫಜಲಪೂರಕ್ಕೆ ಸಂಬಂಧಿಸಿದಂತೆ ಮೊಬೈಲ್ ಸಂಖ್ಯೆ 7899755427 ಹಾಗೂ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿಗೆ ಸಂಬಂಧಿಸಿದಂತೆ 9535775141ಗೆ ಸಂಪರ್ಕಿಸಲು ಕೋರಲಾಗಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular