ಕಲಬುರಗಿ: ಪ್ರಸಕ್ತ 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ ಆಂಗ್ಲ ಮಾಧ್ಯಮ ಮಾದರಿ ಶಾಲೆಗÀಳಲ್ಲಿ 6ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಕೆಳಕಂಡ ಖಾಲಿಯಿರುವ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಸಮಾಜ ವಿಜ್ಞಾನ 3 ಶಿಕ್ಷಕರ ಹುದ್ದೆಗಳಿಗೆ ಬಿ.ಎ. ಬಿ.ಇಡಿ., ಇಂಗ್ಲೀಷ 4 ಶಿಕ್ಷಕರ ಹುದ್ದೆಗೆ ಬಿ.ಎ. ಬಿ.ಇ.ಡಿ. ಪಾಸಾಗಿರಬೇಕು. ವಿಜ್ಞಾನ 3 ಶಿಕ್ಷಕರ ಹುದ್ದೆಗೆ ಮತ್ತು ಗಣಿತ 1 ಶಿಕ್ಷಕ ಹುದ್ದೆಗೆ ಬಿ.ಎಸ್ಸಿ. ಬಿ.ಇ.ಡಿ (ಪಿ.ಸಿ.ಎಂ.ಬಿ) ಪಾಸಾಗಿರಬೇಕು. ಉರ್ದು ವಿಷಯದ 2 ಶಿಕ್ಷಕರ ಹುದ್ದೆಗಳಿಗೆ ಬಿ.ಎ. ಬಿ.ಇ.ಡಿ. ಪಾಸಾಗಿರಬೇಕು.
ಟಿ.ಇ.ಟಿ. ಉತ್ತೀರ್ಣ, ಕನಿಷ್ಠ ಎರಡು ವರ್ಷದ ಅನುಭವ ಹಾಗೂ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು 2020ರ ಸೆಪ್ಟೆಂಬರ್ 30 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಆಯಾ ತಾಲೂಕಿನ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಕಲಬುರಗಿ, ಅಫಜಲಪೂರ ಹಾಗೂ ಜೇವರ್ಗಿ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಹಾಗೂ ಅಫಜಲಪೂರಕ್ಕೆ ಸಂಬಂಧಿಸಿದಂತೆ ಮೊಬೈಲ್ ಸಂಖ್ಯೆ 7899755427 ಹಾಗೂ ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿಗೆ ಸಂಬಂಧಿಸಿದಂತೆ 9535775141ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…