ನಾಗಮಂಗಲ: ಮನೆಯಲ್ಲಿ ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 75 ಸಾವಿರ ರೂ. ಮೌಲ್ಯದ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ರಹಮತ್‍ನಗರ ನಿವಾಸಿ ಜಾವದ್‍ಪಾಷ ಅವರ ಜಮೀನಿನಲ್ಲಿ ಗಾಂಜಾ ಸೊಪ್ಪು ಬೆಳೆದು ಮಾರಾಟ ಮಾಡುತ್ತಿದ್ದ ಇಮ್ರಾಜ್ ಖಾನ್, ಸಯ್ಯದ್ ಅಜರ್ ಹಾಗೂ ಮಹಮದ್ ಜುಹೇಬ್ ಎಂಬುವರನ್ನು ವಶಕ್ಕೆ ಪಡೆದಿರುವ ಟೌನ್ ಪೊಲೀಸರು ಸುಮಾರು 75 ಸಾವಿರ ಮೌಲ್ಯದ 2.650 ಕೆಜಿ ಗಾಂಜಾ ಸೊಪ್ಪು, 3 ಮೊಬೈಲ್, 1900
ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಮಹಮ್ಮದ್ ಎಂಬಾತ ಗಾಂಜಾ ಸೊಪ್ಪನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ, ಡಿವೈಎಸ್ಪಿ ಕೆ.ಬಿ.ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಕೆ.ರಾಜೇಂದ್ರ, ಪಿಎಸ್‍ಐ ಎಂ.ಎ.ರವಿಕಿರಣ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಪೋಬೆಷನರಿ ಪಿಎಸ್‍ಐ ಸಿದ್ದರಾಜು, ಸಿಬ್ಬಂದಿಗಳಾದ ರಮೇಶ್, ಕುಮಾರ, ಟಿ.ಬಿ.ಕೃಷ್ಣ, ಸಿದ್ದಪ್ಪ, ಉಮೇಶ್, ಜೀಪ್ ಚಾಲಕರಾದ ರಾಜೇಶ್, ಬಸವರಾಜು, ಮಹೇಂದ್ರಸ್ವಾಮಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…