ಬೀದರ್: ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಅವರು ಬುಧವಾರ ಸಂಜೆ ಬೀದರ್ ನಲ್ಲಿ ನಡೆದ ಪ್ರೌಢಶಾಲಾ ಶಿಕ್ಷಕರ, ಉಪನ್ಯಾಸಕರ, ಹಾಗೂ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರ ಸಂಘಟನೆಯ ಜೊತೆ ಚರ್ಚೆ ನಡೆಸಿ ಮುಂಬರುವ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮತ ಯಾಚಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಬಂಡೆಪ್ಪ ಕಾಶೆಂಪುರ್ ಅವರನ್ನು ಸನ್ಮಾನಿಸಲಾಯಿತು.