ಶಹಾಬಾದ:ಕೋವಿಡ್-19 ಲಾಕ್ಡೌನ್ ಸಂತ್ರಸ್ತರಿಗೆ ಪರಿಹಾರ ಹಾಗೂ ಆರ್ಥಿಕ ಪುನಶ್ಚೇತನಕ್ಕೆ ಪರ್ಯಾಯ ನೀತಿಗಳ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಫೆಡರೇಷನ್ (ಸಿಐಟಿಯು ಸಂಯೋಜಿತ) ತಾಲೂಕಾ ಸಂಘಟನೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನಾಕಾರರು ಮಾತನಾಡಿ ಕೋವಿಡ್ -19 ನಿಂದ ಕಾರ್ಮಿಕರು ಕೆಲಸವಿಲ್ಲದೇ ಪರದಾಡುವಂತಾಗಿದೆ. ಈಗಾಗಲೇ ಘೋಷಿಸಿರುವ 5 ಸಾವಿರ ರೂ ಪರಿಹಾರ ವಿತರಣೆ ವಿಸ್ತರಿಸಬೇಕು.ಇದುವರೆಗೂ ಪರಿಹಾರ ಧನ ಸಿಗದವರ ಖಾತೆಗೆ ಹಣ ಜಮಾ ಮಾಬೇಕು. ಕೆಲಸವಿಲ್ಲದ ಕಟ್ಟಡ ಕಾರ್ಮಿಕರಿಗೆ ವಾರಕ್ಕೆ 2ಸಾವರ ರೂ.ಯಂತೆ ಕೋವಿಡ್ ಪರಿಹಾರ ಘೋಷಿಸಬೇಕು. ಕೋವಿಡ್ ಹಿನ್ನೆಲೆಯಲ್ಲಿ ಮದುವೆ ಸಹಾಯಧನ, ಪಿಂಚಣಿಗಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಬೇಕು.ಅಲ್ಲದೇ ಶೀಘ್ರ ವಿಲೇವಾರಿ ಮಾಡಬೇಕು. ಸೇವಾ ಸಿಂಧು ಕೇಂದ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು.ಖಾಲಿ ಇರುವ ಕಾರ್ಮಿಕ ವೃತ್ತ ನಿರೀಕ್ಷಕರ ಮತ್ತು ಇತರ ಹುದ್ದೆಗಳ ನೇಮಕಾತಿ ಮಾಡಬೇಕು.ಬೆಂಗಳೂರಿನಲ್ಲಿ ನೀಡಿದಂತೆ ರಾಜ್ಯದ ಎಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ರೇಷನ್ ಕಿಟ್ ನೀಡಬೇಕೆಂದು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಫೆಡರೇಷನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಯ್ಯ.ಜಿ.ಸ್ವಾಮಿ, ತಾಲೂಕಾ ಸಂಚಾಲಕ ನಾಗಪ್ಪಾ ರಾಯಚೂರಕರ್, ಭೀಮಶ್ಯಾ ಹಳ್ಳಿ, ನೀಲು ಚವ್ಹಾಣ, ಮರೆಪ್ಪ ಹೊನಗುಂಟಿಕರ್, ಶರಣಬಸಪ್ಪ ಗೋಳಾ, ಭೀಮರಾವ ಮತ್ತಿಮುಡ, ವಿಠ್ಠಲ ಇಂಜನಫೈಲ್,ಕಲ್ಯಾಣಿ ಹಳ್ಳಿ, ಅಂಬರೇಶ, ರಾಜು ಇಂಜನಫೈಲ್, ಹಾಜಪ್ಪ ಗೋಳಾ ಇತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…