ಬಿಸಿ ಬಿಸಿ ಸುದ್ದಿ

ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಬೆಳೆ ನಷ್ಟ ಪರಿಹಾರ ಪಡೆಯಲು ಅವಕಾಶ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2020ರ ಮುಂಗಾರು ಹಂಗಾಮಿನಲ್ಲಿ ಸ್ಧಳ, ನಿರ್ದಿಷ್ಟ, ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘ ಸ್ಫೋಟ ಮತ್ತು ಗುಡುಗು ಮಿಂಚುಗಳಿಂದ ಬೆಂಕಿ ಅವಗಡ ಸಂಭವಿಸಿ ಬೆಳೆ ನಷ್ಟವುಂಟಾದಲ್ಲಿ ವೈಯಕ್ತಿಕ ನಷ್ಟದ ನಿರ್ಧರಣೆ ಹಾಗೂ ಬೆಳೆ ವಿಮಾ ನಷ್ಟ ಪರಿಹಾರ ಇತ್ಯರ್ಥಪಡಿಸಲು ಅವಕಾಶ ನೀಡಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಈ ಯೋಜನೆಯನ್ನು ಅನುಷ್ಟಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ. ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇ. 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಗುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುತ್ತದೆ.

ಇಂತಹ ಸ್ಥಳೀಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆವಿಮೆ ಮಾಡಿಸಿರುವ ರೈತರು ಈ ಕುರಿತು ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಯ ಪ್ರತಿನಿಧಿಗಳು, ಸಹಾಯವಾಣಿಗೆ ತಕ್ಷಣ ಸೂಚನೆ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಿದ್ದಲ್ಲಿ ಬೆಳೆ ವಿಮೆ ಪ್ರತಿನಿಧಿಗಳು ತಮ್ಮ ಜಮೀನುಗಳಿಗೆ ಭೇಟಿ ನೀಡಿ ಬೆಳೆ ನಷ್ಟ ಮೌಲ್ಯಮಾಪನ ಮಾಡಿ ಮಾರ್ಗಸೂಚಿಯನ್ವಯ ಪರಿಹಾರ ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800 425 7919ಗೆ, ಆಯಾ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಅಥವಾ ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯ ಕೆಳಕಂಡ ವಿಮಾ ಪ್ರತಿನಿಧಿಗಳನ್ನು ಸಂಪರ್ಕಿಸಬಹುದಾಗಿದೆ.

ಕಲಬುರಗಿ ಜಿಲ್ಲೆಗೆ ಸಂಬಂಧಿಸಿದಂತೆ ಮೊಬೈಲ್ ಸಂಖ್ಯೆ 8747905495, 9538185343, 9620006812, 88675087050ಗೆ, ಚಿತ್ತಾಪುರ ತಾಲೂಕು 9741232108, ಅಫಜಲಪುರ ತಾಲೂಕು-9902356434, ಜೇವರ್ಗಿ ತಾಲೂಕು-9900859561, ಆಳಂದ ತಾಲೂಕು-9702944943, ಕಲಬುರಗಿ ತಾಲೂಕು: 9538185343, ಚಿಂಚೋಳಿ ತಾಲೂಕು: 8095384057 ಹಾಗೂ ಸೇಡಂ ತಾಲೂಕು-7204579007 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

58 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

1 hour ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago