ಸ್ಥಗಿತಗೊಂಡ ಶುದ್ಧ ಕುಡಿಯುವ ನೀರಿನ ಘಟಕ

0
49

ಯಾದಗಿರಿ: ಶಹಾಪುರ ತಾಲ್ಲೂಕಿನ ಸಗರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭವಾಗುವುದಕ್ಕಿಂತ ಮುಂಚೆ ಸ್ಥಗಿತಗೊಂಡಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಿವಶರಣಪ್ಪ ಕೂಡ್ಲೂರು ಹೇಳಿದರು.

ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಓಣಿಯಲ್ಲಿ ನಿರ್ಮಿಸಿರುವ ಈ ಘಟಕಕ್ಕೆ ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿದೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಗ್ರಾಮದಲ್ಲಿ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದೆ ಎಂದು ನೇರವಾಗಿ ಆರೋಪಿಸಿದರು.ಈ ಕಾಮಗಾರಿಯಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಶಾಮೀಲಾಗಿ ಸರಕಾರದ ಬೊಕ್ಕಸಕ್ಕೆ ಹಾನಿ ಮಾಡಿದ್ದಾರೆ.

Contact Your\'s Advertisement; 9902492681

ಸರ್ಕಾರದ ಬೊಕ್ಕಸಕ್ಕೆ ಹಾನಿಯಾದ ಹಣವನ್ನು ಅಧಿಕಾರಿಗಳಿಂದಲೇ ಮರುಪಾವತಿಸುವಂತೆ ಸಂಬಂಧಪಟ್ಟ ಮೇಲಧಿಕಾರಿಗಳು ಆದೇಶಿಸಬೇಕು ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವದು ಎಂದು ಎಚ್ಚರಿಕೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here