ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಕಾಲಿಕ ನಿಧನ: ಸಂಸದ ಬಿ.ವೈ.ರಾಘವೇಂದ್ರ ಸಂತಾಪ

0
40

ಶಿವಮೊಗ್ಗ: ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಅಕಾಲಿಕ ನಿಧನಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಭಾರತ ಸಂಗೀತಲೋಕ ಹಾಗೂ ಚಿತ್ರರಂಗ ಕಂಡ ಮಹಾನ್ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ದೈವಾಧೀನರಾದ ವಿಷಯ ತಿಳಿದು ತೀವ್ರ ದು:ಖವಾಯಿತು. ಕಳೆದ 50 ವರ್ಷಗಳಿಂದ ವಿವಿಧ ಭಾಷೆಗಳಲ್ಲಿ ಸುಮಾರು 45 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಗಿನ್ನೆಸ್ ದಾಖಲೆ ಪುಸ್ತಕ ಸೇರಿದೆ ಹಾಗೂ ಹಲವು ಸಿನಿಮಾಗಳಲ್ಲಿ ನಟನೆಯಲ್ಲೂ ಸಹ ತೊಡಗಿಸಿಕೊಂಡಿದ್ದು, ಕನ್ನಡ ನಾಡು ಕಂಡ ಅಮೂಲ್ಯ ರತ್ನವನ್ನು ನಾವು ಇಂದು ಕಳೆದುಕೊಂಡಿದ್ದೇವೆ.

Contact Your\'s Advertisement; 9902492681

ಎಸ್.ಪಿ.ಬಿ.ರವರು ನಾಲ್ಕು ಭಾಷೆಗಳಲ್ಲಿ 6 ರಾಷ್ಟ್ರ ಪ್ರಶಸ್ತಿ ಪಡೆದ ಗಾಯಕರಲ್ಲಿ ಒಬ್ಬರಾಗಿದ್ದರು. ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರ ನಿಧನದಿಂದ ಭಾರತ ಒಬ್ಬ ಶ್ರೇಷ್ಠ ಗಾಯಕರನ್ನು ಕಳೆದುಕೊಂಡು ಸಂಗೀತಲೋಕ ಭರಡಾಗಿದೆ.

ಮೃತರ ಆತ್ಮಕ್ಕೆ ಶಾಂತಿ ನೀಡಲೆಂದು ಹಾಗೂ ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here