ಬೆಂಗಳೂರು: ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು, ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಹಲ್ಲೆ ಮಾಡಿದರೆ ಶಿಕ್ಷೆ ಹಾಗೂ ದಂಡ ವಿಧಿಸುವ ಅವಧಿಯನ್ನು ಹೆಚ್ಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗ ಅಭಿವೃದ್ಧಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ವಿದಾನಪರಿಷತ್ ಕಲಾಪದಲ್ಲಿಂದು ಕರ್ನಾಟಕ ಸಾಂಕ್ರಾಮಿಕ ರೋಗಗಳ ವಿಧೇಯಕ 2020 ನ್ನು ಪ್ರಸ್ತಾವನೆ ಮಂಡಿಸಿ, ಈ ಮೊದಲು ಮೂರು ತಿಂಗಳ ಜೈಲುವಾಸವಿತ್ತು. ಈಗ ಪ್ರಸ್ತುತ ಕೋವಿಡ್ ವಾರಿಯರ್ಸ್ಗಳು ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇತ್ತೀಚೆಗೆ ಹಲ್ಲೆ ಮಾಡಿರುವ ಪ್ರಕರಣಗಳು ಕಂಡು ಬಂದಿದ್ದು, ಕೇಂದ್ರ ಸರ್ಕಾರವು ಸಹ ಕಾನೂನು ಜಾರಿ ಮಾಡಿದೆ.
ಯಾರೇ ವ್ಯಕ್ತಿಗಳು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ಅಡ್ಡಿಪಡಿಸಿದರೆ, ಮೂರು ತಿಂಗಳಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ. 50 ಸಾವಿರದಿಂದ 2 ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುವುದು. ಕೋವಿಡ್ ಸಂದರ್ಭದಲ್ಲಿ ವೈದ್ಯರು ಹಾಗೂ ವಾರಿಯರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದರೆ ಆರು ತಿಂಗಳಿಂದ 7 ವರ್ಷಗಳ ಜೈಲುವಾಸ,1 ಲಕ್ಷದಿಂದ 5 ಲಕ್ಷದವರೆಗೆ ದಂಡ ವಿಧಿಸಲಾಗುವುದು. ಪ್ರಚೋದನೆ ನೀಡಿದ ವ್ಯಕ್ತಿಗೂ ಸಹ ಈ ಶಿಕ್ಷೆ ಅನ್ವಯಿಸುತ್ತದೆ.
ಸರ್ಕಾರಿ-ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿದರೆ, ಮುಷ್ಕರ ಮಾಡಿದ ಸಂದರ್ಭದಲ್ಲಿ ನ್ಯಾಯಾಲಯವು ವಿಧಿಸುವ ಆದೇಶವನ್ನು ನಿರ್ಲಕ್ಷಿಸಿದರೆ, ಅಂತಹ ವ್ಯಕ್ತಿಗಳ ಆಸ್ತಿಗಳನ್ನು ಜಪ್ತಿ ಮಾಡಲಾಗುವುದು ಎಂದು ವಿವರಣೆ ನೀಡಿದ ನಂತರ ಪ್ರಸ್ತಾವನೆಯನ್ನು ಅಂಗೀಕರಿಸಿ, ವಿಧೇಯಕಕ್ಕೆ ಅನುಮೋದನೆ ದೊರಕಿದೆ ಎಂದು ಸಭಾಪತಿಗಳು ತಿಳಿಸಿದರು.
ಇದೇ ಸಂದರ್ಭದಲ್ಲಿ 2020ನೇ ಸಾಲಿನ “ಕರ್ನಾಟಕ ಪೌರಸಭೆಗಳ (ತಿದ್ದುಪಡಿ) ವಿಧೇಯಕ” ವನ್ನು ಪೌರಾಡಳಿತ ಸಚಿವರಾದ ಕೆ.ಸಿ.ನಾರಾಯಣಗೌಡ ಅವರು ಪ್ರಸ್ತಾವನೆಯನ್ನು ಮಂಡಿಸಿದರು. ಪ್ರಸ್ತಾವನೆಯನ್ನು ಅಂಗೀಕರಿಸಿ, ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…