ಶಹಾಬಾದ:ತಮ್ಮ ಇಡೀ ಜೀವನವನ್ನೇ ಜನಸೇವೆಗಾಗಿ ಮೀಸಲಾಗಿಟ್ಟಿದ್ದ ಅಜಾತಶತ್ರುಮ ಸರಳಸಜ್ಜನಿಕೆಯ ರಾಜಕಾರಣಿ ರೇಲ್ವೆ ಖಾತೆ ಸಚಿವ ಸುರೇಶ ಅಂಗಡಿ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬಿಜೆಪಿ ಮುಖಂಡ ಅನಿಲ ಬೋರಗಾಂವಕರ್ ಹೇಳಿದರು.
ಅವರು ಗುರುವಾರ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾದ ರೇಲ್ವೆ ಖಾತೆ ಸಚಿವ ಸುರೇಶ ಅಂಗಡಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಉತ್ತಮ ಸಂಸದರಾಗಿ ಹಾಗೂ ಸಚಿವರಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು.ಯಾವುದೇ ಹಮ್ಮು ಬಿಮ್ಮುಗಳಿಲ್ಲದ ವ್ಯಕ್ತಿಯಾಗಿದ್ದರು.ರಾಜಕೀಯ ಕ್ಷೇತ್ರ ಹೊರತುಪಡಿಸಿ, ಶಿಕ್ಷಣ ಉದ್ಯಮದ ಜತೆಗೆ ಹಲವಾರು ಕ್ಷೇತ್ರಗಳಲ್ಲಿ ತೀವ್ರ ಕಳಕಳಿ ಮತ್ತು ಕಾಳಜಿ ಹೊಂದಿದ್ದರು.ಸುಮಾರು ನಾಲ್ಕು ಬಾರಿ ಸಂಸದರಾಗಿ ಜನಸ್ನೇಹಿ ರಾಜಕೀಯ ವಲಯದಲ್ಲಿ ಮಾದರಿಯಾಗಿದ್ದರು.ಬಿಜೆಪಿಗೆ ಗಟ್ಟಿಯಾದ ನೆಲೆ ಒದಗಿಸಿದ್ದ ಅಂಗಡಿಯವರ ಅಗಲಿಕೆ ತೀವ್ರ ದುಃಖ ಉಂಟು ಮಾಡಿದೆ ಎಂದರು.
ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಸೂರ್ಯಕಾಂತ ವಾರದ,ಸುಭಾಷ ಜಾಪೂರ, ಅರುಣ ಪಟ್ಟಣಕರ್,ಅಣ್ಣಪ್ಪ ದಸ್ತಾಪೂರ,ಯಲ್ಲಪ್ಪ ದಂಡಗುಲಕರ್,ನಿಂಗಣ್ಣ ಹುಳಗೋಳಕರ್,ಶ್ರೀಧರ ಜೋಷಿ, ಸಂಜಯ ಕೋರೆ, ರಾಜಶೇಖರ ಕೋಬಾಳ, ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ಭಾಗಿರಥಿ ಗುನ್ನಾಪೂರ, ಜಯಶ್ರೀ ಸೂಡಿ,ಬಸವರಾಜ ಬಿರಾದಾರ,ಸುನೀಲ ಕುಂಬಾರ, ಸಿದ್ರಾಮ ಕುಸಾಳೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…