ಶಹಾಪುರ: ತಾಲ್ಲೂಕಿನಲ್ಲಿ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಜನಜೀವನ ತತ್ತರಗೊಂಡು ಮನೆಯ ಮುಂದುಗಡೆ ನಿಲ್ಲಿಸಿದ ಕಾರುಗಳು ಬೈಕ್ಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿವೆ.
ಕೆಲವೊಂದು ಬೈಕ್ಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ ಕೆರೆಯ ನೀರು ಮನೆಯಂಗಳದಲ್ಲಿ ನುಗ್ಗಿ ಮನೆಯಲ್ಲಿರುವ ಸಂಪೂರ್ಣ ದವಸ ಧಾನ್ಯಗಳು ನೀರು ಪಾಲಾಗಿವೆ.ಶಾಸಕರ ಪಕ್ಕದಲ್ಲಿರುವ ಈ ವಾರ್ಡ್ ಇನ್ನೂ ಅಭಿವೃದ್ಧಿ ಕಂಡಿಲ್ಲ,ಮೊನ್ನೆ ಮೊನ್ನೆ ತಲೆ ಎತ್ತಿದ ಶಾಸಕರ ವಾರ್ಡ್ ಡಾಲರ್ಸ್ ಕಾಲೊನಿ ಬೆಳದಿಂಗಳಂತೆ ಕಂಗೊಳಿಸುತ್ತಿದೆ .
ಆದರೆ ಈ ಕಾಲೊನಿ ಹುಟ್ಟಿಕೊಂಡು ಸುಮಾರು ಹತ್ತನ್ನೆರಡು ವರ್ಷಗಳಾದರೂ ಅಭಿವೃದ್ಧಿ ಕಾಣದೇ ಇರುವುದು ವಿಪರ್ಯಾಸ ಎಂದು ಸ್ಥಳೀಯ ನಿವಾಸಿ ಆನಂದ್ ಹೇಳಿದರು.
ಅಧಿಕಾರಿಗಳ ಹಾಗೂ ರಾಜಕಾರಣಿಗಳ ಬೇಜವಾಬ್ದಾರಿತನವೇ ಇದಕ್ಕೆ ಕಾರಣ ಎಂದು ಖಾರವಾಗಿ ನುಡಿದರು.ಇಲ್ಲಿ ರಸ್ತೆ ಚರಂಡಿಗಳೇ ಇಲ್ಲದೆ ಅನಾಥವಾಗಿದೆ. ಇಲ್ಲಿ ಹೇಳೋರು ಕೇಳೋರು ಯಾರೂ ಇಲ್ಲದಂತಾಗಿದೆ. ಸಾಕಷ್ಟು ಬಾರಿ ನಗರಸಭೆ ಅಧಿಕಾರಿಗಳಿಗೆ ಹಾಗೂ ನಗರಸಭೆ ಸದಸ್ಯರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…