ಕಲಬುರಗಿ: ನಿಂತ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಸೇರಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಆಳಂದ ರಸ್ತೆಯ ಸಾವಳಗಿ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ.
ಗರ್ಭಿಣಿ ಇರ್ಫಾನಾ ಬೇಗಂ(25), ರುಬಿಯಾ ಬೇಗಂ(50), ಅಬೇದಾಬಿ ಬೇಗಂ (50), ಜಯತುನಬಿ(60), ಮುನೀರ್ (28), ಮುಹಮ್ಮದ್ ಅಲಿ (38) ಹಾಗೂ ಶೌಕತ್ ಅಲಿ(29) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಆಳಂತ ತಾಲೂಕಿನ ನಿವಾಸಿಗಳು ಎಂದು ತಿಳಿದುಬಂದಿದೆ.
ಗರ್ಭಿಣಿಯಾಗಿದ್ದ ಇರ್ಫಾನಾ ಬೇಗಂಗೆ ತಡರಾತ್ರಿ ಹೆರಿಗೆ ನೋವು ಶುರುವಾಗಿದ್ದು, ಹೆರಿಗೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಚಾಲಕ ಅವಸರವಾಗಿ ಕಾರು ಓಡಿಸುತ್ತಿದ್ದ ವೇಳೆ ರಸ್ತೆ ಪಕ್ಕ ಎದುರಿಗೆ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಅಪಘಾತದಲ್ಲಿ ತೀವ್ರತೆಗೆ ಕಾರು ಮತ್ತು ಲಾರಿ ಎರಡೂ ಕೂಡಾ ರಸ್ತೆ ಬದಿಯ ಹೊಂಡಕ್ಕೆ ಉರುಳಿದೆ. ಈ ಬಗ್ಗೆ ಕಲಬುರಗಿ ಸಂಚಾರ ಠಾಣೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಾಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…