ಬೆಂಗಳೂರು: ನೂತನ ಪ್ರವಾಸೋದ್ಯಮ ನೀತಿಯು ರಾಜ್ಯದ ಪ್ರಮುಖ ಪ್ರವಾಸಿತಾಣಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಪ್ರವಾಸೊದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ತಿಳಿಸಿದರು.
ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ನೂತನ ಪ್ರವಾಸೋದ್ಯಮ ನೀತಿ 2020-25 ರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಸೋದ್ಯಮ ಅಭಿವೃದ್ಧಿಯ ಗುರಿ ಸಾಧಿಸಬೇಕಾದರೆ ಸಮರ್ಪಕ ರೂಪುರೇಷೆಗಳು ಹಾಗೂ ಯೋಜನೆಗಳನ್ನು ಒಳಗೊಂಡ ಒಂದು ನೀತಿಯನ್ನು ರೂಪಿಸಿಕೊಳ್ಳುವುದು ಅನಿವಾರ್ಯವಾಗಿದ್ದು, ಪ್ರವಾಸೋದ್ಯಮದ ಸಮಗ್ರ ಹಾಗೂ ಸರ್ವತೋಮುಖ ಅಬಿವೃಧಿಗಾಗಿ ತನ್ನ ಮುಂದಿನ ಐದು ವರ್ಷಗಳ ಕಾರ್ಯಕ್ರಮಗಳನ್ನು ಮತ್ತು ಯೋಜನೆಗಳನ್ನು ಒಳಗೊಂಡ “ಕರ್ನಾಟಕ ಪ್ರವಾಸೋದ್ಯಮ ನೀತಿ” 2020-25 ನ್ನು ಇಲಾಖೆಯು ರೂಪಿಸಿದೆ ಎಂದರು.
ಕರ್ನಾಟಕ ರಾಜ್ಯವು ತನ್ನ ಭವ್ಯ ಪರಂಪರೆ ಹಾಗೂ ಸಾಂಸ್ಕøತಿಕ ಇತಿಹಾಸವನ್ನು ಸಾರುವ ಶಿಲ್ಪ ಕಲೆಯ ನೆಲವೀಡಾಗಿದ್ದು, ವಿವಿಧ ಪರಿಸರ ಹಾಗೂ ಸಂಸ್ಕøತಿಯನ್ನು ಬಿಂಬಿಸುವ ವೈವಿಧ್ಯಮಯ ಪ್ರವಾಸಿ ತಾಣಗಳನ್ನು ಹೊಂದಿರುವ ರಾಜ್ಯವಾಗಿದೆ. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಅಭಯಾರಣ್ಯ ಗಿರಿಧಾಮಗಳು, ಭವ್ಯ ಜಲಪಾತಗಳು, ನದಿಗಳು ಹಾಗೂ ದೇವಾಲಯಗಳನ್ನು ಹೊಂದಿರುವ ಕರ್ನಾಟಕ ಪ್ರವಾಸೋದ್ಯಮ “ಒಂದು ರಾಜ್ಯ ಹಲವು ಜಗತ್ತುಗಳು” ಎಂಬ ತನ್ನ ಘೋಷ ವಾಕ್ಯದ ಪ್ರತಿಬಿಂಬದಂತಿದೆ ಎಂದರು.
ರಾಜ್ಯದ ಪ್ರವಾಸಿತಾಣಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ದೇಶ-ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಸ್ಥಳೀಯ ಸಮುದಾಯಗಳ ಪಾಲ್ಗೊಳ್ಳುವಿಕೆ ಪ್ರಮುಖವಾಗಲಿದ್ದು, ಹೆಚ್ಚಿನ ಆದಾಯ ಹಾಗೂ ಕೌಶಲ್ಯಾಭಿವೃದ್ಧಿಗೂ ದಾರಿ ಮಾಡಿಕೊಡಲಿದೆ. ಇಲಾಖೆಯ ವಿವಿಧ ಕಾರ್ಯಕ್ರಮಗಳ ಮೂಲಕ ಸ್ಥಳೀಯರಿಗೆ ತರಬೇತಿ ಮತ್ತು ಉದ್ಯೋಗವಕಾಶಗಳನ್ನು ಒದಗಿಸುವ ಒಂದು ವಿಶಾಲವಾದ ದೃಷ್ಟಿಕೋನವನ್ನು ಈ ನೀತಿ ಹೊಂದಿದೆ ಎಂದರು.
ವಿಶ್ವವನ್ನೇ ಕಾಡುತ್ತಿರುವ ಕೊರೋನಾ ಸಾಂಕ್ರಾಮಿಕ ರೋಗದಿಂದ ವಿಶ್ವದಲ್ಲಿ ಅತಿ ಹೆಚ್ಚು ನಷ್ಟವನ್ನು ಅನುಭವಿಸಿರುವ ಉದ್ಯಮ ಎಂದರೆ ಪ್ರವಾಸೋದ್ಯಮ. ಇಂತಹ ವಿಷಮ ಪರಿಸ್ಥಿತಿಯಲ್ಲಿ ನಲುಗಿರುವ ರಾಜ್ಯದ ಪ್ರವಾಸೋದ್ಯಮದ ಪುನ:ಶ್ಚೇತನಕ್ಕಾಗಿ ಈ ನೀತಿಯು ಪೂರಕವಾಗಲಿದೆ ಎಂದರು.
ಬದಲಾದ ತಂತ್ರಜ್ಞಾನಕ್ಕೆ ಅನುಗುಣವಾಗಿ ಪ್ರವಾಸೋದ್ಯಮದಲ್ಲಿ ತಾಂತ್ರಿಕತೆಗಳನ್ನು ಮತ್ತು ಡಿಜಿಟಲ್ ಉಪಕ್ರಮಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಲಾಗಿದೆ. ಪ್ರವಾಸಿ ತಾಣಗಳನ್ನು ಆಯ್ಕೆ ಮಾಡುವಂತಾಗಲು ವಿಶ್ವದರ್ಜೆಯ ಪ್ರವಾಸಿ ಮೂಲಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ ಎಂದರು. ಇದೇ ಸಂದರ್ಭದಲ್ಲಿ “ಕಾಡುಗೊಲ್ಲ ಅಭಿವೃದ್ಧಿ ನಿಗಮವನ್ನು” ಸ್ಥಾಪನೆ ಮಾಡಲಾಗುವುದು ಎಂದರು.
ಸಮಾರಂಭದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ನಾರಾಯಣ ಸ್ವಾಮಿ, ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ರಾಜುಗೌಡÀ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶೃತಿ, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…