ಸುರಪುರ: ಶಾಸಕ ನರಸಿಂಹ ನಾಯಕ (ರಾಜುಗೌಡ) ಅವರು ವಿಧಾನಸಭಾ ಅಧೀವೇಶನದಲ್ಲಿ ಭಾಗವಹಿಸಿರುವುದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನಲ್ಲಿ ಮಳೆಯಿಂದ ಏನಾದರು ಸಮಸ್ಯೆಗಳು ಉಂಟಾದಲ್ಲಿ ತಮ್ಮ ಕಾರ್ಯಕರ್ತರಿಗೆ ತಿಳಿಸುವಂತೆ ವಿನಂತಿಸಿಕೊಂಡಿದ್ದರಿಂದ ತಾಲೂಕಿನಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಟೀಂ ರಾಜುಗೌಡ ಸೇವಾ ಸಮಿತಿ ಕಾರ್ಯಕರ್ತರು ಭೇಟಿ ನೀಡಿ ಹಾನಿಯ ಮಾಹಿತಿ ಸಂಗ್ರಹಣೆ ಆರಂಭಿಸಿದರು.
ನಗರದಲ್ಲಿನ ಅನೇಕ ಕಡೆಗಳಿಗೆ ಟೀಂ ರಾಜುಗೌಡ ಸೇವಾ ಸಮಿತಿಯ ಕಾರ್ಯಕರ್ತ ಪರಶುರಾಮ ನಾಟೇಕಾರ ಮತ್ತಿತರರು ಭೇಟಿ ನೀಡಿ ಮಳೆಯಿಂದ ಬಿದ್ದ ಮನೆಗಳ ಮಾಹಿತಿ ಸಂಗ್ರಹ ಮಾಡಿದರು.ನಗರದ ರಂಗಂಪೇಟೆ ದೀವಳಗುಡ್ಡ ತಿಮ್ಮಾಪುರ ಕುಂಬಾರಪೇಟೆ ವೆಂಕಟಾಪುರ ಮೇದಾಗಲ್ಲಿ ಮತ್ತಿತರೆಡೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸಿ ಶಾಸಕರಿಗೆ ತಿಳಿಸುವ ಕುರಿತು ಭರವಸೆ ನೀಡಿದರು.
ಅದೇರೀತಿಯಾಗಿ ಪೇಠ ಅಮ್ಮಾಪುರ ಭಾಗದಲ್ಲಿ ಮಲ್ಲಿಕಾರ್ಜುನ ರಡ್ಡಿ ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ ಪ್ರಕಾಶ ಕುಂಬಾರ ರಾಜನಕೊಳ್ಳೂರ ಭಾಗದಲ್ಲಿ ರೋಹಿತ್ ಪಾಟೀಲ್ ಖಾನಾಪುರ ಎಸ್.ಹೆಚ್ ಭಾಗದಲ್ಲಿ ತಿಗಳಪ್ಪ ಕವಡಿಮಟ್ಟಿ ಅರಕೇರಾ ಜೆ ಭಾಗದಲ್ಲಿ ಕೃಷ್ಣಾರಡ್ಡಿ ಮುದನೂರ ದೇವತ್ಕಲ್ ಭಾಗದಲ್ಲಿ ಸಂತೋಷ ರಡ್ಡಿ ಮಳೆ ಹಾನಿಯ ಕುರಿತು ಮಾಹಿತಿ ಸಂಗ್ರಹಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…