ಬೆಂಗಳೂರು ನಗರಕ್ಕೆ ದೆಹಲಿ ಸ್ವರೂಪ: ಆಮ್ ಆದ್ಮಿ ಸಂಕಲ್ಪ

ಬೆಂಗಳೂರು: ದೆಹಲಿ ಮಾದರಿಯಲ್ಲಿ ಕರ್ನಾಟಕದಲ್ಲೂ ಭ್ರಷ್ಟಾಚಾರ ನಿರ್ಮೂಲನೆ ಮಾಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಬಿಬಿಎಂಪಿ ಚುನಾವಣೆಯ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾತನಾಡಿದ ಆಮ್ಆದ್ಮಿ ಪಾರ್ಟಿಯ ರಾಜ್ಯ ವೀಕ್ಷಕರಾದ ರೋಮಿ ಭಾಟಿ ಅವರು, “ಕಳೆದ ಆರು ವರ್ಷಗಳ ಹಿಂದೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಮ್ಮ ಪಕ್ಷ ಆರೋಗ್ಯ ಮೂಲಸೌಕರ್ಯ, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಯನ್ನು ತಂದಿದೆ. ಆಡಳಿತದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ನಮ್ಮ ಗುರಿಯನ್ನು ಸಾಧಿಸಿದ್ದೇವೆ. ತೆರಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡಿ, ಎಲ್ಲಿಯೂ ಆದಾಯ ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ ಆದಾಯ ಸರಾಗವಾಗಿ ಹರಿದುಬರುತ್ತಿದೆ’’ ಎಂದರು.

ದೇಶವನ್ನು ರಕ್ಷಣೆ ಮಾಡುವುದು ನಮ್ಮ ಮೂಲಧ್ಯೇಯವಾಗಿದೆ. ಬಿಬಿಎಂಪಿ ಚುನಾವಣೆ ನಮ್ಮ ಮುಂದಿದೆ. ಬೂತ್ಮಟ್ಟದಲ್ಲಿ ಜನಸಾಮಾನ್ಯರ ಬಳಿಗೆ ಹೋಗಬೇಕು. 6 ವರ್ಷಗಳಲ್ಲಿ ಆಪ್ ದೆಹಲಿಯಲ್ಲಿ ಸಾಕಷ್ಟು ಬದಲಾವಣೆ ತಂದಿದೆ. ಇದೇ ಮಾದರಿಯನ್ನು ಮುಂದಿಟ್ಟುಕೊಂಡು ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಳೀಯ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರವನ್ನು ಸೂಚಿಸುವಂತಹ ಕಾರ್ಯಸೂಚಿಯೊಂದಿಗೆ ಮತದಾರರ ಬಳಿಗೆ ಹೋಗಬೇಕೆಂದು ನಮ್ಮ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತಂದ ಪರಿಣಾಮ ದೆಹಲಿಯಲ್ಲಿ ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದ ಶೇ.20 ರಷ್ಟು ಮಕ್ಕಳು ಸರ್ಕಾರಿ ಶಾಲೆಗೆ ಸೇರುತ್ತಿದ್ದಾರೆ. ಅದೇ ರೀತಿ ದೆಹಲಿಯ ಶಿಕ್ಷಣ ಕ್ಷೇತ್ರದ ಫಲಿತಾಂಶ ಶೇ.98 ರಷ್ಟಾಗಿದೆ. ಇದೇ ರೀತಿಯ ಬದಲಾವಣೆಯನ್ನು ತರುವ ಕಾರ್ಯಯೋಜನೆಗಳನ್ನು ಮುಂದಿಟ್ಟು ಬೆಂಗಳೂರನ್ನು ಬದಲಾಯಿಸಬೇಕು. ಸ್ಥಳೀಯ ಮಟ್ಟದ ಸಮಸ್ಯೆಗಳು ಮತ್ತು ಪರಿಹಾರಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗಬೇಕು ಎಂದರು.

ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿಯೂ ನಮ್ಮ ಪಕ್ಷ ಸ್ಪರ್ಧೆ ನಡೆಸಲಿದೆ. ಈ ಚುನಾವಣೆಯಲ್ಲಿ ರೈತರ ಹಿತರಕ್ಷಣೆ ನಮ್ಮ ಆದ್ಯತೆಯಾಗಿರುತ್ತದೆ ಎಂದು ಹೇಳುವ ಮೂಲಕ ಅವರು, ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಆಪ್ ಅಧ್ಯಕ್ಷ ಮೋಹನ್ ದಾಸರಿ ಅವರು ಮಾತನಾಡಿ, “ಒಂದು ವರ್ಷದ ಹಿಂದೆ ಆಮ್ ಪಕ್ಷದಲ್ಲಿ ನಾವು ಬೆರಳೆಣಿಕೆಯಲ್ಲಿದ್ದೆವು. ಆದರೆ, ದಿನದಿಂದ ದಿನಕ್ಕೆ ಪಕ್ಷದ ಕಡೆಗೆ ಒಲವು ತೋರುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಜನರು, ಕಾರ್ಯಕರ್ತರು, ಸ್ವಯಂಸೇವಕರು ಆಪ್ ಪಕ್ಷವನ್ನು ಸೇರುತ್ತಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಬದಲಾವಣೆ ತರಬೇಕೆಂಬ ಸಂಕಲ್ಪ ಹೊಂದಿದ್ದೇವೆ. ದೆಹಲಿ ಮಾದರಿಯ ಬದಲಾವಣೆಯನ್ನು ತರಲು ಕಾರ್ಯಯೋಜನೆಯನ್ನು ರೂಪಿಸುತ್ತಿದ್ದೇವೆ. ಬಿಬಿಎಂಪಿ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳಿಗೆ ಕಾರ್ಯತಂತ್ರ ರೂಪಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಸುರೇಶ್ ರಾಠೋಡ್ ಮತ್ತು ಇತರೆ ಗಣ್ಯರು ಇದ್ದರು.

sajidpress

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

9 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

20 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

20 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

22 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

22 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

22 hours ago