ಶಹಾಪುರ : ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿ ಮೇಲೆ ದೊಡ್ಡ ದೊಡ್ಡ ತಗ್ಗು ಗುಂಡಿಗಳು ಬಿದ್ದಿರುವ ದೃಶ್ಯ ತಾಲೂಕಿನ ಹತ್ತಿಗೂಡೂರು ದಾಬಾದ ಹತ್ತಿರ ಕಂಡು ಬಂದಿತು.
ರಸ್ತೆಯ ಮಧ್ಯೆಯಲ್ಲಿ ಬಿದ್ದಿರುವ ಗುಂಡಿಗಳು ಪ್ರಾಣ ಕಂಟಕ ತಪ್ಪಿದ್ದಲ್ಲ ರಾತ್ರಿ ಸಂಚಾರಕ್ಕೆ ಈ ರಸ್ತೆ ಯೋಗ್ಯವಲ್ಲ ಎಂದು ಸ್ಥಳೀಯರು ಹೇಳಿದರು.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆ ಕೂಡಲೇ ಈ ರಸ್ತೆಯನ್ನು ದುರಸ್ತಿ ಮಾಡಿ ವಾಹನ ಸವಾರರಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.