ನೇರ ನೇಮಕಾತಿಯಲ್ಲಿ ದಿವ್ಯಾಂಗರ ಮೀಸಲಾತಿ ಹೆಚ್ಚಳ: ಬಸವರಾಜ ಹೆಳವರ ಹರ್ಷ

0
96

ಕಲಬುರಗಿ: ಸರಕಾರಿ ಹುದ್ದೆಗಳ ನೇರ ನೇಮಕಾತಿಗಳಲ್ಲಿ ದಿವ್ಯಾಂಗರಿಗೆ ಎ ಮತ್ತು ಬಿ ಗ್ರುಪ್ ಹುದ್ದೆಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಲಾಗಿದೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ದಿವ್ಯಾಂಗರಿಗೆ ಗ್ರೂಪ್‌ ‘ಎ’ ಮತ್ತು ‘ಬಿ’ ಹುದ್ದೆಗಳ ನೇರ ನೇಮಕಾತಿಯಲ್ಲಿ ದಿವ್ಯಾಂಗ ಅಭ್ಯರ್ಥಿಗಳಿಗೆ ಹಿಂದೆ ಶೇ. 3 ರಷ್ಟು ಇದ್ದ ಮೀಸಲಾತಿಯನ್ನು ಶೇ 4ಕ್ಕೆ ಹೆಚ್ಚಿಸಿ ಹಾಗೂ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಶೇಕಡ 5ರ ಸಮತಳ ಮೀಸಲಾತಿಯನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿರುವ ದಿವ್ಯಾಂಗರ ಬಹುದಿನಗಳ ಕನಸು ನನಸಾದಂತಾಗಿದೆ.

Contact Your\'s Advertisement; 9902492681

ನೇರ ನೇಮಕಾತಿಯಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದು ಸ್ವಾಗತಾರ್ಹ, ಇದರಿಂದ ದಿವ್ಯಾಂಗರಿಗೂ ಕೂಡ ಸಿವಿಲ್ ಸೇವೆಗಳ ಉನ್ನತ ಹುದ್ದೆಗಳಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿವೆ ಎಂದು ಡಿಸೆಬಲ್ಡ ಹೆಲ್ಪಲೈನ ಫೌಂಡೆಶನನ ರಾಜ್ಯ ಸಂಯೋಜಕರಾದ ಬಸವರಾಜ ಹೆಳವರ ಯಾಳಗಿ ಹರ್ಷ ವ್ಯಕ್ತ ಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here