ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಎರಡು ವರ್ಷಗಳ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧದರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಇಲಾಖೆಯ www.sw.kar.nic.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅವಶ್ಯಕ ದಾಖಲಾತಿಗಳೊಂದಿಗೆ 2020ರ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಬಾರ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 40ವರ್ಷ ಮೀರಿರಬಾರದು. ಹಿರಿಯ ನ್ಯಾಯವಾದಿಗಳ ಬಳಿ ತರಬೇತಿ ನಿಯೋಜನೆಗೊಂಡಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣಪತ್ರವನ್ನು ತಹಶೀಲ್ದಾರರಿಂದ ದೃಢೀಕರಿಸಿ ಲಗತ್ತಿಸಬೇಕು.
ಆಯ್ಕೆಯಾದ ಕಾನೂನು ಪದವೀಧÀರರಿಗೆ 10,000 ರೂ.ಗಳ ಮಾಸಿಕ ತರಬೇತಿ ಭತ್ಯೆ ನೀಡಲಾಗುತ್ತದೆ. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2020ರ ನವೆಂಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…