ಬಿಸಿ ಬಿಸಿ ಸುದ್ದಿ

ಅ.‌ 2 ರಂದು ಹಮ್ಮಿಕೊಂಡಿರುವ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಮುಂದೂಡಿಕೆಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಗ್ರಾಮಾಂತರ ಪ್ರದೇಶದಲ್ಲಿ ಈಗಾಗಲೇ ಚರ್ಮಗಂಟುರೋಗ (LSD) ವ್ಯಾಪಕವಾಗಿ ಹರಡಿರುವುದರಿಂದ ಹಾಗೂ ತಜ್ಞರ ಅಭಿಪ್ರಾಯದಂತೆ ರೋಗ ಕಾಣಿಸಿಕೊಂಡ 5 ಕಿ.ಮೀ ಸುತ್ತಮುತ್ತ LSD ಲಸಿಕೆ ಹಾಕಬೇಕಾಗಿದೆ. ಈ ಚರ್ಮಗಂಟು ರೋಗ ವೈರಾಣು ಕಾಯಿಲೆಯಾಗಿದ್ದು, ಕಾಲುಬಾಯಿ ಜ್ವರದ ಲಸಿಕೆ ಹಾಕುವುದರಿಂದ ಜಾನುವಾರುಗಳಿಗೆ ಅಡ್ಡಪರಿಣಾಮ ಉಂಟಾಗುತ್ತದೆ.

ಅಲ್ಲದೆ, ಈ ಕಾಯಿಲೆಗೆ ಚಿಕಿತ್ಸೆ ನೀಡಲು ತೆರಳುವ ಪಶುವೈದ್ಯರು ಹಾಗೂ ಸಿಬ್ಬಂದಿಗಳು ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ತೆರಳಿದ್ದಲ್ಲಿ ಕಾಯಿಲೆಯು ಹೆಚ್ಚಾಗುವ ಸಂಭವಿರುವುದರಿಂದ ಅಕ್ಟೋಬರ್‌ 2 ರಂದು ಹಮ್ಮಿಕೊಂಡಿರುವ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಮುಂದೂಡಿ ಎಂದು ಕರ್ನಾಟಕ ಪಶುವೈದ್ಯಕೀಯ ಸಂಘ ಮನವಿ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಸಂಘದ ಅಧ್ಯಕ್ಷರಾದ ಡಾ ಎಸ್‌ ಸಿ ಸುರೇಶ್‌, ಈಗಾಗಲೇ ಟ್ಯಾಗಿಂಗ್‌ ಸಂಧರ್ಭದಲ್ಲಿ ಗ್ರಾಮಸ್ಥರು ಅಸಹಕಾರ ಹಾಗೂ ಕೆಲವೆಡೆ ಬಹಿಷ್ಕಾರ ಮಾಡಿರುವ ಪ್ರಕರಣಗಳು ಹೆಚ್ಚಾಗಿವೆ. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಕೋವಿಡ್‌-೧೯ ಕಾಯಿಲೆಯೂ ಹರಡಿರುವುದರಿಂದ ಲಸಿಕಾ ಕಾರ್ಯಕ್ರಮಕ್ಕೆ ರೈತರು ಸಹಕಾರ ನೀಡುವುದು ಕಷ್ಟವಾಗಿರುತ್ತದೆ. ಸೆಪ್ಟೆಂಬರ್‌ 23 ರಂದು ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಕೂಡಾ ರಾಜ್ಯದ ಎಲ್ಲಾ ಜಿಲ್ಲೆಗಳ ಇಲಾಖೆಯ ಉಪನಿರ್ದೇಶಕರಗಳೂ ಕೂಡಾ ಕಾಲುಬಾಯಿಜ್ವರದ ಲಸಿಕಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ೨ ತಿಂಗಳ ಅವಧಿಗೆ ಮುಂದೂಡುವಂತೆ ಅಭಿಪ್ರಾಯವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.

ಸಂಘದ ಪ್ರಧಾನ ಕಾರ್ಯದರ್ಶಿ ಡಾ ಶಿವರಾಮ್‌ ಎ.ಡಿ ಅವರು, ಕರ್ನಾಟಕ ಪಶುವೈದ್ಯಕೀಯ ಸಂಘವು ಸೆಪ್ಟೆಂಬರ್‌ 27 ರಂದು ಗೂಗಲ್‌ ಮೀಟ್‌ ಮೂಲಕ ನಡೆಸಿದ ತುರ್ತು ಕಾರ್ಯಕಾರಿ ಸಮಿತಿಯಲ್ಲಿ ಹಾಜರಿದ್ದ 30 ಜಿಲ್ಲೆಗಳ ಪ್ರತಿನಿಧಿಗಳು, ಮೊದಲು ಚರ್ಮಗಂಟು (ಎಲ್‌.ಎಸ್‌.ಡಿ) ನಿಯಂತ್ರಣಕ್ಕೆ ಬರಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ರೋಗ ನಿಯಂತ್ರಣ ಬಂದ ನಂತರ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಹುದೆಂದು ಒಕ್ಕೊರಲಿನ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಮಾರ್ಚ್‌ 2020 ರಲ್ಲಿ ಹಮ್ಮಿಕೊಳ್ಳಬೇಕಾಗಿದ್ದ ಲಸಿಕಾ ಕಾರ್ಯಕ್ರಮವನ್ನು ಲಸಿಕೆ ಸರಬರಾಜು ಮತ್ತು ಟ್ಯಾಗ್‌ಗಳನ್ನು ಸಕಾಲದಲ್ಲಿ ಪೂರೈಸದ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದೆ.

ಈ ಹಂತದಲ್ಲಿ ಜಾನುವಾರುಗಳು ಚರ್ಮಗಂಟು ರೋಗದಿಂದ ಬಳಲುತ್ತಿವೆ. ಹಾಗೇಯೇ ಕೋವಿಡ್‌ – 19 ಮೂರನೇ ಹಂತ ತಲುಪಿರುವುದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒತ್ತಡದಲ್ಲಿದ್ದಾರೆ. ಚರ್ಮಗಂಟು ರೋಗವು ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ವಿಚಾರವಾಗಿ ವಿಜ್ಞಾನಿಗಳ ಜೊತೆ ಸಂಘವು ಚರ್ಚಿಸಿದಾಗ ಚರ್ಮಗಂಟು ರೋಗವು ಸಹ ವೈರಾಣುವಿನಿಂದ ಉತ್ಪತ್ತಿಯಾಗಿದೆ. ಈಗ ನೀಡಬೇಕಾಗಿರುವ ಕಾಲುಬಾಯಿಜ್ವರದ ಲಸಿಕೆಯೂ ಸಹ ವೈರಾಣುವಿನಿಂದಲೇ ತಯಾರು ಮಾಡಲಾಗಿದ್ದು, ಲಸಿಕೆ ಮಾಡಿದ ನಂತರ ದೇಹದಲ್ಲಿ ವ್ಯಾಕ್ಸಿನೇಷನ್‌ ಸ್ಟ್ರೆಸ್‌ ಉಂಟಾಗುತ್ತದೆ. ಈಗಾಗಲೇ ಚರ್ಮಗಂಟು ರೋಗದ ವೈರಾಣು ದೇಹದಲ್ಲಿದ್ದು, ಒಟ್ಟಿಗೆ ಸೇರಿ ಜಾನುವಾರುಗಳಲ್ಲಿ ರೋಗಗಳನ್ನು ಉಲ್ಭಣಗೊಳಿಸುತ್ತದೆ. ಇದರಿಂದಾಗಿ ರಾಸುಗಳು ಬಹಳ ಬೇಗ ಮರಣ ಹೊಂದುವ ಸಾಧ್ಯತೆ ಇದೆ. ನಾವು ರೋಗಗಳಿಂದ ರಕ್ಷಿಸಲು ನೀಡುತ್ತಿರುವ ಲಸಿಕೆಯೇ ರೈತರಿಗೆ ಮಾರಣಾಂತಿಕವಾಗಬಹುದು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಪಶುವೈದ್ಯರು ರೈತರಿಗೆ ತುರ್ತು ಚಿಕಿತ್ಸೆ ಉಳಿದ ಸೇವೆಗಳನ್ನು ಸದಾ ನೀಡುತ್ತಲೇ ಬಂದಿದ್ದಾರೆ. ಲಸಿಕೆ ಮಾಡಲು ಕಟಿಬದ್ದರಾಗಿದ್ದೇವೆ. ಇಂತಹ ದುಸ್ತರ ಪರಿಸ್ಥಿತಿಯನ್ನು ಪರಿಗಣಿಸಿ, ಚರ್ಮಗಂಟು ರೋಗ (ಎಲ್‌.ಎಸ್.ಡಿ) ಖಾಯಿಲೆಯನ್ನು ನಿಯಂತ್ರಿಸಲು ಕನಿಷ್ಠ 2 ತಿಂಗಳ ಕಾಲಾವಕಾಶ ಬೇಕಾಗಿದೆ. ಈ ಕಾಯಿಲೆಯು ಹತೋಟಿಗೆ ಬಂದ ನಂತರ ಕಾಲುಬಾಯಿಜ್ವರದ ಲಸಿಕಾ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲು ಸಮಸ್ತ ಪಶುವೈದ್ಯರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಲಸಿಕಾ ಕಾರ್ಯಕ್ರಮವನ್ನು 2 ತಿಂಗಳ ಅವಧಿಕಗೆ ಮುಂದೂಡಲು ಸಂಘವು ಮನವಿ ಮಾಡಿದೆ. ಒಂದು ವೇಳೆ ಸರ್ಕಾರವು ಸಂಘದ ಮನವಿಯನ್ನು ಪರಿಗಣಿಸದೇ ನಿಗದಿಪಡಿಸಿದ ದಿನದಂದೇ ಲಸಿಕಾ ಕಾರ್ಯಕ್ರಮ ಕೈಗೊಂಡರೆ ರಾಜ್ಯದ ಯಾವುದೇ ಪಶುವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಂಘ ಸ್ಪಷ್ಟಪಡಿಸಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago