ಒಂದು ಭೂಮಿ ಒಂದು ಮನೆ: ಆನ್‍ಲೈನ್ ಕಾರ್ಯಕ್ರಮಕ್ಕೆ ಚಾಲನೆ

0
76

ಕಲಬುರಗಿ: ಡಬ್ಲ್ಯೂ.ಡಬ್ಲ್ಯೂ.ಎಫ್.(WWF)-ಇಂಡಿಯಾ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವುಗಳ ಸಂಯುಕ್ತಾಶ್ರಯದಲ್ಲಿ ರಾಜ್ಯದ 1 ರಿಂದ 8ನೆ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ “ಒಂದು ಭೂಮಿ ಒಂದು ಮನೆ” ಎಂಬ ಆನ್‍ಲೈನ್ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಾರ್ಯಕಾರಿ ಸಮಿತಿಯ ರಾಜ್ಯ ಸಂಯೋಜಕರಾದ ಎಂ. ಎನ್. ಮುಷ್ಟೂರಪ್ಪ ಅವರು ತಿಳಿಸಿದ್ದಾರೆ.

ಗೂಗಲ್ ಜಾಲತಾಣದಲ್ಲಿ ಲಿಂಕ್ ಬಳಸಿ ನೋಂದಣಿ ಮಾಡಿಕೊಂಡು 2020ರ ಸೆಪ್ಟೆಂಬರ್ ಮಾಹೆಯಿಂದ ನವೆಂಬರ್ ರವರೆಗೆ ಪ್ರತಿವಾರ ಅರ್ಧ ಗಂಟೆ ನಡೆಯುವ ಕಾರ್ಯಕ್ರಮವನ್ನು ದಿಕ್ಷಾ (ಆiಞshಚಿ) ಅಥವಾ ಫೇಸ್ ಬುಕ್‍ನಲ್ಲಿಯೂ ವೀಕ್ಷಿಸಬಹುದಾಗಿದೆ. ಕಾರ್ಯಕ್ರಮದ ನಂತರ ಕೇಳುವ ಸರಳ ಪ್ರಶ್ನೆಗಳಿಗೆ ಉತ್ತರಿಸಿ ಫೀಡ್ ಬ್ಯಾಕ್ ನೀಡಲಾಗುತ್ತದೆ. ಶಿಕ್ಷಕರ ಅಥವಾ ಪೋಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.

Contact Your\'s Advertisement; 9902492681

ಈ ಕಾರ್ಯಕ್ರಮದಲ್ಲಿ ಉಚಿತವಾಗಿ ಭಾಗವಹಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಡಿಜಿಟಲ್ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ Soundaryavalli, Head – Karnataka State office, WWF India . 9845402299ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here