ಬಿಸಿ ಬಿಸಿ ಸುದ್ದಿ

ಮಾದಕ ವ್ಯಸನ ಮುಕ್ತ ಕಲಬುರಗಿ ನಿರ್ಮಿಣಕ್ಕೆ ಯುವಜನರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಕರೆ

ಕಲಬುರಗಿ: ಕಳೆದ 20-25 ದಿನಗಳಿಂದ ಕಲಬುರಗಿ ಜಿಲ್ಲೆಯ ವಿವಿಧೆಡೆ ಪೊಲೀಸರು ದಾಳಿ ನಡೆಸಿ, ಅಕ್ರಮ ಗಾಂಜಾ ಅಡ್ಡೆಗಳನ್ನು ಬಯಲಿಗೆಳೆದು ಆರೋಪಿಗಳನ್ನು ಬಂಧಿಸುತ್ತಿರುವುದು ಸಂತಸದ ವಿಚಾರ. ಆದರೆ, ಇಷ್ಟೊಂದು ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗುತ್ತಿರುವುದನ್ನು ನೋಡಿದರೆ, ನಮ್ಮ ಜಿಲ್ಲೆಯು ಮಾದಕ ವಸ್ತುಗಳ ಕೇಂದ್ರ ತಾಣವಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕುರಿತು ಬರೆದುಕೊಂಡಿರು ಶಾಸಕ ಮಾದಕ ವ್ಯಸನ ಎಂಬುದು ಇಡೀ ಜಗತ್ತನ್ನೇ ಆವರಿಸಿರುವ ಒಂದು ಪಿಡುಗು. ಈ ಪಿಡುಗು ಇತ್ತೀಚೆಗೆ ನಮ್ಮ ಜಿಲ್ಲೆಯಲ್ಲೂ ವ್ಯಾಪಕವಾಗಿ ಹಬ್ಬಿರುವಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಮಾದಕ ದ್ರವ್ಯ ಚಟಕ್ಕೆ ಬಲಿಯಾಗುವವರಲ್ಲಿ ಕಾಲೇಜು ವಿದ್ಯಾರ್ಥಿಗಳೇ ಅಧಿಕ. ಈ ವ್ಯಸನಗಳಿಗೆ ದಾಸರಾಗುವುದೆಂದರೆ ಹಣ ಕೊಟ್ಟು ರೋಗಗಳನ್ನು ಕೊಂಡುಕೊಂಡಂತೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಜಿಲ್ಲೆಯ ವಿದ್ಯಾರ್ಥಿಗಳು ಜಾಗೂರಕರಾಗಿಬೇಕೆಂದು ಮನವಿ ಮಾಡಿದ ಅವರು, ಮೋಜಿನ ಹೆಸರಲ್ಲಿ ಕ್ಷಣಿಕ ತೃಪ್ತಿಗಾಗಿ ದುಶ್ಚಟಗಳಿಗೆ ಬಲಿಯಾಗಿ, ತಮ್ಮ ಅಮೂಲ್ಯ ಜೀವನವನ್ನು ಹಾಳುಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದ ಅವರು ದೇಶದ ಭವಿಷ್ಯದ ಬೆಳಕಾಗಿರುವ ಯುವಕರು, ಇಲ್ಲಸಲ್ಲದ ಚಟಗಳಿಗೆ ಬಲಿಯಾಗುವುದಕ್ಕಿಂತ ಮುಂಚೆ ತಮ್ಮ ಕನಸುಗಳು, ತಂದೆ – ತಾಯಿ ತಮ್ಮ ಮೇಲಿಟ್ಟಿರುವ ಭರವಸೆ, ತಮ್ಮ ಗುರಿಯತ್ತ ಒಮ್ಮೆ ತಿರುಗಿ ನೋಡಬೇಕು ಎಂದು ಕೀವಿ ಮಾತು ಹೇಳಿದ್ದಾರೆ.

ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಡ್ರಗ್ಸ್‌ನಂತಹ ಪಿಡುಗುಗಳ ಸಮಾಧಿಯ ಮೇಲೆ ಸದೃಢ ಭಾರತವನ್ನು ಕಟ್ಟಬೇಕಾದ ಜವಾಬ್ದಾರಿ ನಮ್ಮ ಯುವಕರ ಹೆಗಲ ಮೇಲಿದ್ದು, ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡುಚ ಪಣ ತೊಡಬೇಕೆಂದು ಜಿಲ್ಲೆಯ ಯುವ ಜನತೆಗೆ ಕರೆ ನೀಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

24 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago