ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಭ್ರಷ್ಟಾಚಾರ ಬಯಲಿಗೆಳೆದಿದ್ದಕ್ಕೆ ಪವರ ಟಿವಿ ಪ್ರಸಾರಕ್ಕೆ ತಡೆ ಹಾಕಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಭ್ರಷ್ಟಾಚಾರ ನಡೆಸಿದ್ದಾರೆಂಬ ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್ ಟಿವಿ ವಾಹಿನಿಯಲ್ಲಿ ಬಂದ್ ಮಾಡಿದಕ್ಕೆ ಎಲ್ಲ ಮಾಧ್ಯಮಗಳು ಒಂದಾಗಬೇಕು ಮತ್ತು ಮಾಧ್ಯಮಕಿರುವ ಪತ್ರಿಕಾ ಸ್ವಾತಂತ್ರ್ಯ ಎತ್ತಿಹಿಡಿಯಬೇಕು.
ಸಿಎಂ ಪುತ್ರ ಪ್ರಶ್ನಾತೀತರೇ? ಇದು ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದೌರ್ಜನ್ಯ ಎಂದು ಹೇಳಬಹುದು.ಪ್ರಜಾಪ್ರಭುತ್ವದ ಒಂದು ಅಂಗವಾಗಿ ಮಾಧ್ಯಮ ಕಾರ್ಯನಿರ್ವಹಿಸುತ್ತದೆ. ‘ಭ್ರಷ್ಟಾಚಾರ’ ದಂತಹ ಸಾಮಾಜಿಕ ಸಮಸ್ಯೆಯ ವಿರುದ್ಧ ಮಾತನಾಡುವ ಹಕ್ಕು ಸಂವಿಧಾನ ನೀಡಿದೆ. ಮಾಧ್ಯಮ ನಾಲ್ಕನೇ ಅಂಗ ಎಂದು ಕರೆಯಲಾಗಿದೆ. ಆದರೆ ರಾಜ್ಯ ಸರಕಾರ ಮಾಧ್ಯಮದ ಸ್ವಾತಂತ್ರ ಹರಣ ಮಾಡಿದರೆ ಪ್ರಜಾಪ್ರಭುತ್ವಕ್ಕೆ ಮತ್ತು ಸಂವಿಧಾನ ಆಶಯಕ್ಕೆ ವಿರುದ್ಧವಲ್ಲವೇ? ಪವರ್ ಟಿವಿ ಮುಖ್ಯಸ್ಥರ ಮೇಲೆ ಆರೋಪ ವಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ಆದರೆ ಟಿವಿಯ ಪ್ರಸಾರ ತಡೆ ಹಾಕಿರುವುದು ಸರಿಯಾದ ಕ್ರಮವಲ್ಲ.
ಈ ಕೂಡಲೇ ರಾಜ್ಯದ ಮುಖ್ಯಮಂತ್ರಿ ಎಚ್ಚೆತ್ತುಕೊಂಡು ಲೈವ್ ಪ್ರಸಾರ ತಕ್ಷಣ ಬಂದ್ ಮಾಡಿದ್ದನ್ನು ಕೈ ಬಿಡಲು ಸೂಚನೆ ನೀಡಬೇಕು ಎಂದು ಆಗ್ರಹಿಸುತ್ತೇನೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…