ಕೊರೊನಾಗೆ ಬಲಿಯಾದ ವಾರಿಯಸ್೯ಗಳಿಗೆ ಪಾಲಿಕೆಯಿಂದ ಪರಿಹಾರ ನೀಡಿ: ಆನಂದ ತೆಗನೂರ

0
38

ಕಲಬುರಗಿ: ಕೊರೊನಾ ನಿಯಂತ್ರಣದಲ್ಲಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟು ಕರ್ತವ್ಯ ನಿರ್ವವಹಿಸುವ ಸಂದರ್ಭದಲ್ಲಿ ಮೃತಪಡುವ ಕೊರೊನಾ ವಾರಿಯರ್ಸ್‌ ಪೌರ ಕಾರ್ಮಿಕರಿಗೆ ಪಾಲಿಕೆಯಿಂದಲೇ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷರಾದ ಆನಂದ ತೆಗನೂರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಕೊರೊನಾ ಸವಾಲುಗಳ ನಡುವೆ ವಾರಿಯರ್ಸ್‌ಗಳಂತೆ ಕರ್ತವ್ಯ ನಿರ್ವಹಿಸುತ್ತಿರುವ ಪಾಲಿಕೆ ಸಿಬ್ಬಂದಿ , ಅಧಿಕಾರಿಗಳು ಮತ್ತು ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲೇ ಕೊರೊನಾ ಸೋಂಕಿಗೆ ಒಳಪಟ್ಟು ಈಗಾಗಲೇ ಹಲವಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ , ಇಂತಹ ವಾರಿಯರ್ಸ್‌ಗಳಿಗೆ ಸಿಗಬೇಕಾದ ಪರಿಹಾರ ಗಗನ ಕುಸುಮವಾಗಿದೆ ಎಂದರು.

Contact Your\'s Advertisement; 9902492681

ಈ ಹಿನ್ನೆಲೆಯಲ್ಲಿ ಕಳೆದ ಮಾರ್ಚನಿಂದ ಇಲ್ಲಿಯವರೆಗೆ ಕೊರೊನಾ ಸೋಂಕಿಗೆ ಬಲಿಯಾಗಿರುವ ಪಾಲಿಕೆ ಸಿಬ್ಬಂದಿ , ಹಾಗೂ ಪೌರ ಕಾರ್ಮಿಕರಿಗೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಪಾಲಿಕೆ ಆಯುಕ್ತರು, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಿ ಕೂಡಲೇ ಕೊರೊನಾ ಸೋಂಕಿಗೆ ಬಲಿಯಾದ ವಾರಿಯರ್ಸ್‌ಗಳಿಗೆ ಪಾಲಿಕೆಯಿಂದಲೇ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here