ಕಲಬುರಗಿ: ವಿಭಾಗ ಕಲಬುರಗಿ (ಜಾ ಮತ್ತು ತ) ಅಬಕಾರಿ ಜಂಟಿ ಆಯುಕ್ತರ ನಿರ್ದೇಶನ ಹಾಗೂ ಕಲಬುರಗಿ ಅಬಕಾರಿ ಉಪ ಆಯುಕ್ತರ ಆದೇಶದ ಮೇರೆಗೆ ಕಲಬುರಗಿ ಉಪವಿಭಾಗ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಜೇವರ್ಗಿ ಅಬಕಾರಿ ವಲಯ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡಿರುವ ಸ್ವದೇಶಿ ಮದ್ಯ, ಬಿಯರ್ ಹಾಗೂ ಕಳ್ಳಭಟ್ಟಿ ಸರಾಯಿಯನ್ನು ಜೇವರ್ಗಿ ಹೊರ ವಲಯದ ಸರ್ಕಾರಿ ಜಾಗದಲ್ಲಿ ಮಂಗಳವಾರ ನಾಶಪಡಿಸಲಾಯಿತು.
ಜೇವರ್ಗಿ ಅಬಕಾರಿ ವಲಯದ ವ್ಯಾಪ್ತಿಯಲ್ಲಿ ದಾಖಲಾದ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡ 712.210 ಲೀಟರ್ ಸ್ವದೇಶಿ ಮದ್ಯ, 117.499 ಲೀಟರ್ ಬಿಯರ್, 38 ಲೀಟರ್ ಕಳ್ಳಬಟ್ಟಿ ಸಾರಾಯಿ ಹಾಗೂ 422(15ಎ) ಪ್ರಕರಣಗಳಡಿ 181.440 ಲೀಟರ್ ಮದ್ಯವನ್ನು ಪರಿಸರಕ್ಕೆ ಧಕ್ಕೆಯಾಗದಂತೆ ನಾಶಪಡಿಸಿ, ಖಾಲಿ ಬಾಟಲಿಗಳಿಂದ ಬಂದ ಹಣವನ್ನು ಸರ್ಕಾರಕ್ಕೆ ಚಲನ ಮೂಲಕ ಭರಿಸಲಾಯಿತು. ನಾಶಪಡಿಸಿದ ಪ್ರಕ್ರಿಯೆ ಕುರಿತು ವಿಡಿಯೋಗ್ರಾಫಿ ಮತ್ತು ಫೋಟೋಗಳÀ ದಾಖಲೆ ಮಾಡಿಸಲಾಯಿತು.
ಈ ನಾಶಪಡಿಸುವ ಪ್ರಕ್ರಿಯೆಯಲ್ಲಿ ಕಂದಾಯ ನಿರೀಕ್ಷಕರಾದ ಚಂದ್ರಶೇಖರ್, ಗ್ರಾಮ ಲೆಕ್ಕಾಧಿಕಾರ ರಜನಿಕಾಂತ್, ಕಲಬುರಗಿ ಉಪ ವಿಭಾಗದ ಅಬಕಾರಿ ನಿರೀಕ್ಷಕ ವಿಠ್ಠಲರಾವ ಎಮ್.ವಾಲಿ, ಜೇವರ್ಗಿ ವಲಯದ ಅಬಕಾರಿ ನಿರೀಕ್ಷಕರಾದ ವನಿತಾ. ಎಸ್., ಅಬಕಾರಿ ಉಪ ನಿರೀಕ್ಷಕ ನಿಂಗನಗೌಡ ಪಾಟೀಲ, ಜೇವರ್ಗಿ ತಹಶೀಲ್ದಾರ ಕಚೇರಿ ಸಿಬ್ಬಂದಿ, ಕಲಬುರಗಿ ಕೆ.ಎಸ್.ಬಿ.ಸಿ.ಎಲ್.ಸಿಬ್ಬಂದಿಗಳು ಹಾಗೂ ಜೇವರ್ಗಿ ವಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…