ಶಹಾಪುರ: ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಾದರ್ಶಗಳು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ನಾಗಣ್ಣ ಬಡಿಗೇರ ಹೇಳಿದರು.
ತಾಲ್ಲೂಕಿನ ತಡಿಬಿಡಿ ಗ್ರಾಮದಲ್ಲಿ ಹಮ್ಮಿಕೊಂಡಿರುವ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಡಾ ಬಿಆರ್ ಅಂಬೇಡ್ಕರ್ ಅವರ ಜೀವನ ಆಧಾರಿತ ಧಾರಾವಾಹಿಯ ಬ್ಯಾನರ್ ಉದ್ಘಾಟಸಿ ಮಾತನಾಡಿದರು.ಮಹಾನಾಯಕ ಧಾರಾವಾಹಿ ಬಹಳ ಅತ್ಯದ್ಭುತವಾಗಿ ಮೂಡಿ ಬರುತ್ತಿದ್ದು ಎಲ್ಲರೂ ನೋಡಲೇಬೇಕಾದ ಮಹಾನಾಯಕ ಚಿತ್ರ ಇದಾಗಿದೆ ಎಂದು ಹೇಳಿದರು.
ತುಳಿತಕ್ಕೊಳಗಾದ ಬಡವರ ದೀನ ದಲಿತರ ಶೋಷಿತರ ಅಂದಿನ ಬದುಕಿನ ಕುರಿತು ಎಳೆ ಎಳೆಯಾಗಿ ಬಿಚ್ಚಿಡುವುದರ ಜೊತೆಗೆ ನಾಡಿಗೆ ಉತ್ತಮ ಸಂದೇಶ ಸಾರುವ ಈ ಧಾರಾವಾಹಿ ಪ್ರಸಾರ ವಾಗುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿ ಆದ್ದರಿಂದ ಜೀ ಟಿವಿ ಕನ್ನಡ ಬಳಗದವರಿಗೆ ಕೃತಜ್ಞತೆಗಳು ಹೇಳಬೇಕಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಶಿವಕುಮಾರ ತಳವಾರ,ಶಿವಪುತ್ರ ಜವಳಿ, ನಿಜಗುಣ ದೋರನಹಳ್ಳಿ,ರಾಜು ಅಣಬಿ,ಧರ್ಮಣ್ಣ ಪೂಜಾರಿ, ತಿಪ್ಪಣ್ಣ ಲಂಡನ್ಕರ್,ಹೊನ್ನಪ್ಪ ದಳಪತಿ,ಶರಣು ಉಳ್ಳೆಸುಗೂರ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…