ರಾಯಚೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಬೇಕಾದರೆ ನಿರಂತರ ಕಠಿಣ ಪರಿಶ್ರಮ ಅತಿ ಅವಶ್ಯಕವೆಂದು ಅಪರ ಜಿಲ್ಲಾಧಿಕಾರಿ ದುರಗೇಶ ಅವರು ಸಲಹೆ ನೀಡಿದರು.
ಅವರಿಂದು ನಗರದ ರಂಗಮಂದಿರದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಾಯಚೂರು ವಿಭಾಗದ ವತಿಯಿಂದ ಸಂಸ್ಥೆಯ ಸಿಬ್ಬಂದಿಗಳ ಮಕ್ಕಳಿಗೆ ಶೈಕ್ಷಣಿಕ ಕ್ಷೇತ್ರದ ಆಯ್ಕೆ, ಸ್ಪೂರ್ತಿ, ಪ್ರೇರಣೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಒಂದು ದಿನದ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಕೇವಲ ಪಠ್ಯ ಪುಸ್ತಕಗಳಿಗೆ ಮಾತ್ರ ಸೀಮಿತರಾಗಬಾರದು, ದೇಶದಲ್ಲಿ ನಡೆಯುತ್ತಿರುವ ಎಲ್ಲ ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಬೆಳಕು ಚೆಲ್ಲಬೇಕು, ಸ್ಪರ್ಧಾತ್ಮಕ ಪರೀಕ್ಷೆಗಳಾದ ಐಎಎಸ್, ಕೆಎಎಸ್, ಪಿಎಸ್‌ಐ, ಐಪಿಎಸ್ ಸೇರಿ ಇನ್ನಿತರ ಪರೀಕ್ಷೆಗಳಿಗೆ ಪ್ರತಿ ನಿತ್ಯ ೬ ರಿಂದ ೮ ಗಂಟೆ ಓದುವದರಲ್ಲಿ ನಿರತರಾದಾಗ ಮಾತ್ರ ಯಶಸ್ವಿಯಾಗಲು ಸಾಧ್ಯವೆಂದರು.
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ನಗರ ಪ್ರದೇಶದ ಮಕ್ಕಳೊಂದಿಗೆ ಎಲ್ಲ ಕ್ಷೇತ್ರದಲ್ಲಿ ಪೈಪೋಟಿ ನೀಡುತ್ತಿದ್ದಾರೆ. ಮಕ್ಕಳಿಗೆ ಶಿಕ್ಷಕರ ಜೊತೆಗೆ ಪಾಲಕರ ಪ್ರೋತ್ಸಾಹ ಅಗತ್ಯ. ವಿದ್ಯಾರ್ಥಿಗಳು ಈ ಹಿಂದೆ ನಡೆದಿರುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸಂಗ್ರಹಿಸಿ ಅಧ್ಯಯನ ಮಾಡುವ ಸಾಮರ್ಥ್ಯ ಮೈಗೊಡಿಸಿಕೊಂಡಾಗ ಮಾತ್ರ ಪರೀಕ್ಷೆ ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ.
ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಗಳ ಮುಖ್ಯ ಪರೀಕ್ಷೆಗೆ ಬರವಣೆಗೆ ಶೈಲಿ ಬದಲಾಯಿಸಿಕೊಳ್ಳಬೇಕಾದರೆ ಪ್ರತಿ ನಿತ್ಯ ಬರೆಯುವದರಲ್ಲಿ ಮಗ್ನರಾಗಬೇಕು. ಇತ್ತೀಚಿಗೆ ಕೆಎಎಸ್ ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯಿಂದ ೨೦ಕ್ಕೂ ಅಧಿಕ ಅಭ್ಯರ್ಥಿಗಳು ಕೆಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರಾಯಚೂರು ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದರು.
ಮಕ್ಕಳಿಗೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು, ಸಮಯ ವ್ಯರ್ಥ ಮಾಡದೆ ಪುಸ್ತಕ, ಪತ್ರಿಕೆ ಹಾಗೂ ವಾರ ಪತ್ರಿಕೆಗಳನ್ನು ಒದುವದರಲ್ಲಿ ನಿರತರಾಗಬೇಕೆಂದರು.
ಈ ಸಂದರ್ಭದಲ್ಲಿ ಡಾ.ಮನೋಹರ ವೈ.ಪತ್ತಾರ, ಸಂಗಮೇಶ ಮಂಗನವರ್, ಸುನೀಲ ಕುಮಾರ್ ಚಂದರಗಿ, ನಾರಾಯಣ ಬಿ.ಗೌಡಗೇರಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…