ಬೆಂಗಳೂರು: ಉತ್ತರಪ್ರದೇಶದ ಪೊಲೀಸರು ನಮ್ಮ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಯೋಗಿ ಆದಿತ್ಯನಾಥ್ ಅವರು ಬೆಲೆ ತೆರಬೇಕಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರ ಜೊತೆಗೆ ಉತ್ತರ ಪ್ರದೇಶ ಪೊಲೀಸರು ತೋರಿದ ದುರ್ವರ್ತನೆ ಖಂಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಪೊಲೀಸರು ಗೃಹಬಂಧನದಲ್ಲಿರಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕೆ ಆ ಕುಟುಂಬದ ಭೇಟಿಗೆ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗೆ ಅವಕಾಶ ನೀಡಲಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರಪ್ರದೇಶದ ಪೊಲೀಸ್ ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿ ಮತ್ತು ನಮ್ಮ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರೇ ಸುರಕ್ಷಿತರಲ್ಲ ಎಂದ ಮೇಲೆ ಅಲ್ಲಿನ ದಲಿತರು, ಮಹಿಳೆಯರು, ರೈತರು, ಕಾರ್ಮಿಕರು ಹೇಗೆ ಸುರಕ್ಷಿತರಾಗಿರಲು ಸಾಧ್ಯ? ಯೋಗಿ ಆದಿತ್ಯನಾಥ್ ಸರ್ಕಾರ ಪ್ರಜಾಪ್ರಭುತ್ವಕ್ಕೆ ಕಳಂಕ ಎಂದರು.
ರಾಹುಲ್ ಮತ್ತು ಪ್ರಿಯಾಂಕ ಬಂಧನ ವಿರೋಧಿಸಿ ಬೆಂಗಳೂರಿನ ಆನಂದ್ ರಾವ್ ವೃತ್ತದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರು ಪ್ರತಿಭಟನೆ ನಡೆಸಿ, ಪಂಜಿನ ಮೆರವಣಿಗೆ ನಡೆಸಿದರು. ಪ್ರತಿಭಟನೆ ನಡೆಸುತ್ತಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಪೊಲೀಸರು ಅರೆಸ್ಟ್ ಮಾಡಿ ನಂತರ ಬಿಡುಗಡೆ ಮಾಡಿದರು.
ಪ್ರತಿಭಟನೆಯಲ್ಲಿ ಮಾಜಿ ಕೇಮದ್ರ ಸಚಿವ ಕೆ.ಹೆಚ್. ಮುನಿಯಪ್ಪ, ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಸೇರಿದಂತೆ ಕಾಂಗ್ರೆಸ್‍ನ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿ, ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…