ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕ್ರೂರವಾಗಿ ಹತ್ಯೆ ಮಾಡಿದ ಆರೋಪಿಗಳಿಗೆ ಕೂಡಲೇ ಶಿಕ್ಷಿಸಿ ಹಾಗೂ ಈ ಪ್ರಕರಣದಲ್ಲಿ ತಾರತಮ್ಯ ಮತ್ತು ನಿರ್ಲಕ್ಷತೆ ತೋರಿಸಿದ ಅಧಿಕಾರಿ ಹಾಗೂ ರಾಜಕಾರಣಿಗಳ ವಿರುದ್ದ ಕಾನೂನು ಕ್ರಮ ಜರುಗಿಸಿ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ ಸಿ ಎಸ್ ರಘು ಅವರ ನೇತೃತ್ವದಲ್ಲಿ ಇಂದ ಪ್ರತಿಭಟನೆಯನ್ನು ನಡೆಸಲಾಯಿತು.
ದಲಿತ ಮಹಿಳೆಯ ಮೇಲೆ ಅತ್ಯಚಾರ ಮಾಡಿದ ನಂತರ ಗಂಭೀರವಾಗಿ ಗಾಯಗೊಳಿಸಲಾಗಿತ್ತು. ದೆಹಲಿಯ ಆಸ್ಪತ್ರೆಗೆ ದಾಖಲಾಗಿ 14 ದಿನಗಳ ಕಾಲ ಜೀವನ ಮರಣದ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿರುತ್ತಾರೆ. ನಂತರ ಹೆಣ್ಣು ಮಗಳ ಮೃತದೇಹವನ್ನು ಕುಟುಂಬಕ್ಕೆ ಒಪ್ಪಿಸದೆ ಆಕೆಯ ಅಂತಿಮ ದರ್ಶನಕ್ಕೂ ಸಹ ಸರಕಾರ ಅವಕಾಶ ನೀಡದೆ ರಾತ್ರೋರಾತ್ರಿ ಪೊಲೀಸ್ ಬಂದೋಬಸ್ತಿನಲ್ಲಿ ಮೃತದೇಹವನ್ನು ಸುಟ್ಟುಹಾಕಿರುತ್ತಾರೆ.
ಇದು ಯುವತಿಯ ಸಾವಿನ ಘೋರಕೃತ್ಯಕ್ಕೆ ಕಾರಣರಾದ ಆರೋಪಿಗಳನ್ನು ರಕ್ಷಿಸುವ ಹೀನ ಕೃತ್ಯವಾಗಿದೆ. ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ವಿಫಲವಾದ ಕೇಂದ್ರ ಹಾಗೂ ರಾಜ್ಯ ಸರಕಾರದ ಸರ್ವಾಧಿಕಾರಿ ದೋರಣೆ ತೋರುತ್ತರುವ ಉತ್ತರಪ್ರದೇಶದ ಉನ್ನತ ಅಧಿಕಾರಿಗಳು ಮತ್ತು ರಾಜಕಾರಣಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…